Breaking News

ಬಸ್​ ಕಾರು ಮುಖಾಮುಖಿ ಡಿಕ್ಕಿ: ಐವರ ದುರ್ಮರಣ

Spread the love

ಚಂದ್ರಾಪುರ: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ಭಾನುವಾರ ಪ್ರಯಾಣಿಕ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ.

ದುರ್ಘಟನೆಯಲ್ಲಿ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ ಸುಮಾರು 115 ಕಿಮೀ ದೂರದಲ್ಲಿರುವ ನಾಗ್ಭಿಡ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ಪಾ ಗ್ರಾಮದಲ್ಲಿ ಸಂಜೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ.

“ನಾಗ್ಪುರದಿಂದ ನಾಗಭೀಡ್‌ಗೆ ಕಾರಿನಲ್ಲಿ ಆರು ಜನರು ಪ್ರಯಾಣಿಸುತ್ತಿದ್ದಾಗ, ಈ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಪ್ರಯಾಣಿಕರ ಬಸ್‌ಗೆ ಡಿಕ್ಕಿ ಹೊಡೆದಿದೆ. ರಭಸದಿಂದ ಕಾರು ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿದರೆ, ಇನ್ನೊಬ್ಬ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಮೃತಪಟ್ಟಿದ್ದಾರೆ. ಒಟ್ಟು ಐವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

 

ಈ ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ನಾಲ್ವರ ಮೃತದೇಹಗಳನ್ನು ಕಟರ್​​​​ನಿಂದ ಕಟ್​ ಮಾಡಿ ಮೃತದೇಹಗಳನ್ನ ಹೊರ ತೆಗೆಯಲಾಗಿದೆ. ಕಾರು ಭಾರಿ ವೇಗದಲ್ಲಿ ಬಂದು ಬಸ್​​ಗೆ ಡಿಕ್ಕಿ ಹೊಡೆದಿದ್ದರಿಂದ ಸಂಪೂರ್ಣ ನಜ್ಜು ಗುಜ್ಜಾಗಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇನ್ನು ಕಾರಿನಲ್ಲಿದ್ದ ಬಾಲಕಿ ಹಾಗೂ ಇನ್ನೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ನಾಗಭಿಡ್ ಗ್ರಾಮಾಂತರ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಮಹಿಳೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿರುವ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ನಾಗ್ಪುರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಸ್​ – ಕಾರು ಡಿಕ್ಕಿಯಲ್ಲಿ ಐವರು ಸಾವನ್ನಪ್ಪಿದ್ದು, ಇದರಲ್ಲಿ ಮೂವರು ಮಹಿಳೆಯರೇ ಆಗಿದ್ದಾರೆ. ಬಾಲಕಿ ಸ್ಥಿತಿ ಗಂಭೀರವಾಗಿದ್ದು, ನಾಗ್ಪುರದಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ