Breaking News

 ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಹೊಸ ತಿರುವು

Spread the love

ಹುಬ್ಬಳ್ಳಿ: ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ವಿವಾಹಿತ ಮಹಿಳೆ ಜೊತೆ ಯುವಕ ಹೊಂದಿದ್ದ ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ ಎಂಬುದು ತನಿಖೆಯಿಂದ‌ ತಿಳಿದು ಬಂದಿದೆ.

ಕಳೆದ ಎರಡು ದಿನಗಳ ಹಿಂದೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ತೋಟದ ಮನೆಯಲ್ಲಿ ಮಲಗಿದ್ದ ನಿಂಗಪ್ಪ ನವಲೂರ (33) ಎಂಬ ಯುವಕನ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆಗೈಯ್ಯಲಾಗಿತ್ತು.

ಈ ಪ್ರಕರಣ ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಇದೇ 7ರಂದು ಯುವಕ ಹಸೆಮಣೆ ಏರಬೇಕಿದ್ದ.‌ ಅಷ್ಟರಲ್ಲಿ ಯುವಕನ ಕೊಲೆ ನಡೆದಿತ್ತು. ಬಳಿಕ ಪ್ರಕರಣದ ತನಿಖೆ ನಡೆಸಿದ ಕಲಘಟಗಿ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸುವ ಮೂಲಕ ಕೊಲೆಗೆ ಕಾರಣವನ್ನು ಸಹ ಬಯಲು ಮಾಡಿದ್ದಾರೆ.

ಮೃತ ಯುವಕ ಜಿನ್ನೂರು ಗ್ರಾಮದ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ. ತಿಳಿದು ಮಹಿಳೆಯ ಪತಿ ಮತ್ತು ಸಹೋದರ ಕೊಲೆ ಮಾಡಿದ್ದಾರೆ. ಮಹಿಳೆಯ ಪತಿ ಮುತ್ತಪ್ಪ ಹುಲ್ಲೊಳ್ಳಿ,‌ ಸಹೋದರ ವೀರಭದ್ರಪ್ಪ ಜಾಲಿಹಾಳನನ್ನು ಬಂಧಿಸಲಾಗಿದೆ. ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ. ಎರಡು ದಿನಗಳಲ್ಲಿಯೇ ಇನ್ಸ್‌ಪೆಕ್ಟರ್ ಶ್ರೀಶೈಲ ಕೌಜಲಗಿ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ‌ಯಶಸ್ವಿಯಾಗಿದೆ.

ಸಹೋದರಿಯರಿಬ್ಬರ ಆತ್ಮಹತ್ಯೆ: ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಭೂಮಿಕಾ ಹಡಪದ (19) ಮತ್ತು ಕಾವೇರಿ ಹಡಪದ (17) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ಮನೆಯಲ್ಲಿ ಯಾರು ಇಲ್ಲದ ವೇಳೆ ಇವರು ಆತ್ಮಹತ್ಯೆ ಮಾಡಿಕೊಂಡಿದ್ದರು.

ಕಲಘಟಗಿಯ ಬೆಂಡಿಗೇರಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ತಾಯಿ‌ ಕೆಲಸಕ್ಕೆಂದು ಹೋದ ವೇಳೆ ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಇಬ್ಬರ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ