Breaking News

6.2 ಕೋಟಿ ರೂಪಾಯಿ ಮೌಲ್ಯದ 10 ಕೆ.ಜಿ ಚಿನ್ನವನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಭಾನುವಾರ ವಶಪಡಿಸಿಕೊಂಡಿದೆ.

Spread the love

ಮುಂಬೈ(ಮಹಾರಾಷ್ಟ್ರ): ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 6.2 ಕೋಟಿ ರೂಪಾಯಿ ಮೌಲ್ಯದ 10 ಕೆ.ಜಿ ಚಿನ್ನವನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಭಾನುವಾರ ವಶಪಡಿಸಿಕೊಂಡಿದೆ.

ಈ ಎರಡೂ ಪ್ರಕರಣಗಳಲ್ಲಿ ಒಟ್ಟು 4 ಮಂದಿಯನ್ನು ಬಂಧಿಸಲಾಗಿದೆ.

ಮೊದಲ ಪ್ರಕರಣದಲ್ಲಿ ದುಬೈನಿಂದ ಬಂದ ಭಾರತೀಯ ಪ್ರಜೆಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪರಿಶೀಲಿಸಲಾಯಿತು. ಈ ವೇಳೆ, ಪ್ರಯಾಣಿಕರ ಸಾಮಾನು ಸರಂಜಾಮುಗಳನ್ನು ಪರಿಶೀಲಿಸಲಾಗಿದ್ದು, 56 ಮಹಿಳೆಯರ ಪರ್ಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪರ್ಸ್​ಗಳಲ್ಲಿ 24 ಕ್ಯಾರೆಟ್ ಚಿನ್ನ ಮತ್ತು ಬೆಳ್ಳಿ ಬಣ್ಣದ ಲೋಹದ ತಂತಿ ಪತ್ತೆಯಾಗಿದೆ. ವಶಪಡಿಸಿಕೊಂಡ ಚಿನ್ನದ ತಂತಿಯ ನಿವ್ವಳ ತೂಕ 2005 ಗ್ರಾಂ ಆಗಿದೆ. ಅದರ ಮೌಲ್ಯ ಸುಮಾರು 1,23,80,875 ಎಂದು ಅಂದಾಜಿಸಲಾಗಿದೆ. ಪ್ರಕರಣದಲ್ಲಿ ಆರೋಪಿ ಪ್ರಯಾಣಿಕನನ್ನು ಬಂಧಿಸಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಗೌಪ್ಯ ಮಾಹಿತಿ ಆಧರಿಸಿ ಶಾರ್ಜಾದಿಂದ ಮುಂಬೈಗೆ ತೆರಳುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ ನಂ. ಐಎಕ್ಸ್ 252ರಲ್ಲಿ ತಡೆ ಹಿಡಿಯಲಾಗಿದೆ. ಈ ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ 24 ಕ್ಯಾರೆಟ್‌ನ 8 ಚಿನ್ನದ ತುಂಡುಗಳನ್ನು ಅವರ ಸೊಂಟದ ಸುತ್ತ ಬಚ್ಚಿಟ್ಟುಕೊಂಡಿರುವುದು ಪತ್ತೆಯಾಗಿದೆ. ತನಿಖೆ ವೇಳೆ 4.94 ಕೋಟಿ ಮೌಲ್ಯದ 8 ಕೆಜಿ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಮತ್ತೊಬ್ಬ ಸಹ ಪ್ರಯಾಣಿಕನನ್ನು ಬಂಧಿಸಲಾಗಿದೆ.

ದೇಶದಲ್ಲಿ ವಿವಿಧ ರೀತಿಯ ಚಿನ್ನದ ಕಳ್ಳಸಾಗಣೆ ಪ್ರಕರಣ ತನಿಖೆ ಮಾಡುವಲ್ಲಿ ಡಿಆರ್‌ಐ ಅಧಿಕಾರಿಗಳು ನಿಯಮಿತವಾಗಿ ಶ್ರಮಿಸುತ್ತಿದ್ದಾರೆ. ಸದ್ಯ ಎರಡೂ ಪ್ರಕರಣಗಳಲ್ಲಿ ಡಿಆರ್‌ಐ ಹೆಚ್ಚಿನ ತನಿಖೆ ನಡೆಸುತ್ತಿದೆ.

ಚಿನ್ನ ಕಳ್ಳಸಾಗಾಟ ಮಾಡುತ್ತಿದ್ದ ಪ್ರಯಾಣಿಕ ಬಂಧನ: ಗುದನಾಳದಲ್ಲಿ 42,78,768 ಮೌಲ್ಯದ 685.7 ಗ್ರಾಂ ಪೇಸ್ಟ್‌ ರೂಪದ ಚಿನ್ನ ಕಳ್ಳಸಾಗಾಟ ಮಾಡುತ್ತಿದ್ದ ಪ್ರಯಾಣಿಕನನ್ನು ಮಾಲುಸಮೇತ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದರು. ಮಸ್ಕತ್‌ನಿಂದ ಆಗಮಿಸಿದ್ದ ಭಾರತೀಯ ಪ್ರಯಾಣಿಕನೊಬ್ಬ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವ ಖಚಿತ ಮಾಹಿತಿಯ ಆಧಾರದ ಮೇಲೆ ಕಸ್ಟಮ್ಸ್ ಏರ್ ಇಂಟೆಲಿಜೆನ್ಸ್ ಘಟಕವು ಆತನನ್ನು ತಡೆದು ಪರಿಶೀಲಿಸಿತ್ತು. ಈ ಸಂದರ್ಭ ಎರಡು ಮಾತ್ರೆಗಳಲ್ಲಿ ಚಿನ್ನದ ಪೇಸ್ಟ್‌ ತುಂಬಿಕೊಂಡು ಅದನ್ನು ಒಳಉಡುಪಿನಲ್ಲಿ ಇರಿಸಿಕೊಂಡು ಕಳ್ಳಸಾಗಾಟ ಮಾಡುತ್ತಿದ್ದುದು ಬೆಳಕಿಗೆ ಬಂದಿತ್ತು.

67 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನ ವಶ: ರಿಯಾದ್‌ನಿಂದ ಹೈದರಾಬಾದ್ ವಿಮಾನ ನಿಲ್ದಾಣದಕ್ಕೆ ಬಂದಿಳಿದ ಪ್ರಯಾಣಿಕರೊಬ್ಬರಿಂದ ಇತ್ತೀಚೆಗೆ 67 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಕಸ್ಟಮ್ಸ್ ಅಧಿಕಾರಿಗಳ ಪ್ರಕಾರ, ಪ್ರಯಾಣಿಕ ಪ್ಯಾಕ್ಸ್ ರಿಯಾದ್‌ನಿಂದ ಬಹ್ರೇನ್ ಮೂಲಕ ಹೈದರಾಬಾದ್‌ಗೆ ತಲುಪಿದ್ದಾನೆ ಎಂದು ತಿಳಿಸಿದ್ದರು.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ