Breaking News

ಗೃಹ ಜ್ಯೋತಿ’ ಯೋಜನೆಯಡಿ ಪ್ರತಿ ಮನೆಗೆ ಉಚಿತ ವಿದ್ಯುತ್ : ಮಾರ್ಗಸೂಚಿ ಹೀಗಿದೆ

Spread the love

ಬೆಂಗಳೂರು : ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಈಗಾಗಲೇ ಅನುಮೋದನೆ ನೀಡಿರುವ ರಾಜ್ಯ ಸರ್ಕಾರ, ಇದೀಗ ಯೋಜನೆಗೆ ಸಂಬಂಧಿಸಿದ ಷರತ್ತು ಹಾಗೂ ನಿಬಂಧನೆಗಳ ಕುರಿತ ಮಾರ್ಗಸೂಚಿಯನ್ನು ಹೊರಡಿಸಿದೆ.

 

ಗೃಹ ಜ್ಯೋತಿ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯಡಿಯ ಫಲಾನುಭವಿಗಳನ್ನು ಗೃಹ ಜ್ಯೋತಿ ಯೋಜನೆಯಡಿಲ್ಲಿ ಸೇರ್ಪಡೆಗೊಳಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ರಾಜ್ಯದ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್​​ವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ ಯೂನಿಟ್​​ಗಳ ಮೇಲೆ ಶೇಕಡಾ 10ರಷ್ಟು ಹೆಚ್ಚಿನ ಬಳಕೆ ಮಿತಿಯನ್ನು ಅನುಮತಿಸಲಾಗಿದೆ.

ಈ ಯೋಜನೆಯನ್ನು ಜುಲೈ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ ತಿಂಗಳಿನಲ್ಲಿ ನೀಡುವ ಬಿಲ್​​ಗೆ ಅನ್ವಯವಾಗುತ್ತದೆ. ಅದರಂತೆ ಈ ಕೆಳಕಂಡ ಷರತ್ತುಗಳೊಂದಿಗೆ ಜಾರಿಗೆ ತರಲು ಆದೇಶಿಸಲಾಗಿದೆ.

ಗೃಹ ಜ್ಯೋತಿ ಯೋಜನೆ ಷರತ್ತುಗಳೇನು? : ಈ ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ. ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ.

ಪ್ರತಿ ತಿಂಗಳ ಮೀಟರ್ ರೀಡಿಂಗ್ ಮಾಡಿದಾಗ, ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್​ನ್ನು ನಮೂದಿಸಲಾಗುತ್ತದೆ. 200 ಯೂನಿಟ್​ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್​ ಪಾವತಿಸಬೇಕು.

ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್​ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ net bill ನೀಡಲಾಗುತ್ತದೆ ಹಾಗೂ ಗ್ರಾಹಕರು net bill ಅನ್ನು ಪಾವತಿಸಬೇಕು.

ಅರ್ಹ ಯುನಿಟ್/ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್​​ ನೀಡಲಾಗುತ್ತದೆ. ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.

ಪ್ರತಿ ಫಲಾನುಭವಿಯು ತನ್ನ customer ID/Account ID ಕಡ್ಡಾಯವಾಗಿ ಆಧಾರ್​​ಗೆ ಜೋಡಣೆ ಮಾಡಬೇಕು. ಪ್ರಸ್ತುತ ಜಾರಿಯಲ್ಲಿರುವ ಭಾಗ್ಯ ಜ್ಯೋತಿ/ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳೂ ಈ ಯೋಜನೆಯಲ್ಲಿ ಸೇರಬಹುದು.

2023ರ ಜೂನ್ 20ರ ಅಂತ್ಯಕ್ಕೆ (ಜೂನ್​ನಲ್ಲಿ ಬಳಸಿದ ವಿದ್ಯುತ್​​ಗೆ ಜುಲೈನಲ್ಲಿ ನೀಡುವ ವಿದ್ಯುತ್ ಬಿಲ್ ಸೇರಿದಂತೆ) ಬಾಕಿ ಇರುವ ವಿದ್ಯುತ್ ಶುಲ್ಕವನ್ನು ಮೂರು ತಿಂಗಳೊಳಗೆ ಪಾವತಿಸಬೇಕು. ಬಾಕಿ ಮೊತ್ತವನ್ನು ನಿಗದಿತ ಅವಧಿಯೊಳಗೆ ಪಾವತಿ ಮಾಡದಿದ್ದಲ್ಲಿ ಅಂತಹ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗುತ್ತದೆ.

ಗೃಹ ವಿದ್ಯುತ್ ಗ್ರಾಹಕರ ಸ್ಥಾವರಗಳಿಗೆ ಮಾಪಕವನ್ನು ಅಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯವಾಗಿರುತ್ತದೆ.

ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಮೀಟರ್ ಇದ್ದಲ್ಲಿ ಒಂದು ಮೀಟರ್​ಗೆ ಮಾತ್ರ ಈ ಯೋಜನೆಯಡಿ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.


Spread the love

About Laxminews 24x7

Check Also

ಐನಾಪೂರ ಗ್ರಾಮದ ಕಾರಿಮಠ ವಸತಿ ಪ್ರದೇಶದ ವಾಲ್ಮೀಕಿ ನಾಯಕ ಸಮುದಾಯದವರಿಂದ ಸನ್ಮಾನ

Spread the loveಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ಇಂದು ಸನ್ಮತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿನೋದ್ ಬರಗಾಲೆ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ