Breaking News
Home / ರಾಜಕೀಯ / ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಬೇಕು ‘ಶಕ್ತಿ ಸ್ಮಾರ್ಟ್​​ಕಾರ್ಡ್

ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಬೇಕು ‘ಶಕ್ತಿ ಸ್ಮಾರ್ಟ್​​ಕಾರ್ಡ್

Spread the love

: ರಾಜ್ಯ ಸರ್ಕಾರ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸೋಮವಾರ ಹೊರಡಿಸಿದೆ.

ಅದರಂತೆ, ಮಹಿಳೆಯರು ಉಚಿತವಾಗಿ ಪ್ರಯಾಣಿಸಬೇಕಿದ್ದರೆ ‘ಶಕ್ತಿ ಸ್ಮಾರ್ಟ್​​ಕಾರ್ಡ್’ ಹೊಂದುವುದು ಕಡ್ಡಾಯವಾಗಿರಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್‌ ಕಾರ್ಡ್‌ಗಳನ್ನು ಪಡೆಯಬಹುದು. ಕಾರ್ಡ್​​ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಾಲ್ಕು ಸಂಸ್ಥೆಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದ್ದು, ಕೆಲವೊಂದು ಷರತ್ತುಗಳೊಂದಿಗೆ ಸೌಲಭ್ಯ ಒದಗಿಸಲು ಆದೇಶಿಸಲಾಗಿದೆ.

ಸ್ಮಾರ್ಟ್​​ಕಾರ್ಡ್ ದೊರೆಯುವವರೆಗೆ ಉಚಿತ ಪ್ರಯಾಣ ಹೇಗೆ?

  • ಶಕ್ತಿ ಸ್ಮಾರ್ಟ್‌ಕಾರ್ಡ್‌ ಅನ್ನು ವಿತರಿಸುವವರೆಗೆ ಭಾರತ ಸರ್ಕಾರ / ಕರ್ನಾಟಕ ಸರ್ಕಾರದ ಇಲಾಖೆ / ಸರ್ಕಾರಿ ಸ್ವಾಮ್ಯದ ಕಛೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಉಚಿತ ಟಿಕೆಟ್‌ ವಿತರಿಸುವ ಸಂದರ್ಭದಲ್ಲಿ ಪರಿಗಣಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಯಾವೆಲ್ಲ ಬಸ್​ಗಳಲ್ಲಿ ಉಚಿತ ಪ್ರಯಾಣ?
    • ಕೆಎಸ್​ಆರ್​ಟಿಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸ೦ಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್​​ಗಳಲ್ಲಿ ಪ್ರಯಾಣಿಸಬಹುದು.
    • ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ