Breaking News

‘ಗೃಹಲಕ್ಷ್ಮಿ’ ಯೋಜನೆಗೆ ಮಾರ್ಗಸೂಚಿ ಹೊರಡಿಸಿದ ಸರ್ಕಾರ

Spread the love

ಬೆಂಗಳೂರು: ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂ.ಗಳನ್ನು ನೀಡುವ ‘ಗೃಹಲಕ್ಷ್ಮಿ’ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿ, ಸರ್ಕಾರ ಮಾರ್ಗಸೂಚಿ ಹೊರಡಿಸಿ ಆದೇಶಿಸಿದೆ.

 

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದೆ. ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂ.ಗಳನ್ನು ನೀಡುವ ‘ಗೃಹಲಕ್ಷ್ಮಿ’ಯೋಜನೆಯನ್ನು ಜಾರಿಗೆ ತಂದಿದೆ.

ಮೇ 20 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನೀಡಿದ ತಾತ್ವಿಕ ಅನುಮೋದನೆ ಮೇರೆಗೆ, ಕರ್ನಾಟಕ ರಾಜ್ಯದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮಿ ಯೋಜನೆ’ಯನ್ನು ಜಾರಿಗೆ ತರಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಲಾಗಿದೆ. ಯೋಜನೆಯನ್ನು 2023-24ನೇ ಸಾಲಿನಲ್ಲಿ ಈ ಕೆಳಕಂಡಂತೆ ಮಾರ್ಗಸೂಚಿ ಹೊರಡಿಸಲಾಗಿದೆ.

1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.

2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ, ಓರ್ವ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸುತ್ತದೆ.

3. ಈ ಯೋಜನೆಯ ಫಲಾನುಭವಿಗಳು 2023ರ ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬೇಕು. ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್‌ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.

4. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಭೌತಿಕವಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

5. ಅರ್ಜಿದಾರರು ಸಲ್ಲಿಸುವ ಪೂರ್ಣ ಪ್ರಮಾಣದ ಅರ್ಜಿಯಲ್ಲಿನ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡುವುದು, ಅರ್ಜಿಯಲ್ಲಿನ ಅಂಶಗಳ ಬಗ್ಗೆ, ತದನಂತರ ಪರಿಶೀಲನೆ ಮಾಡಲಾಗುತ್ತದೆ. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುತ್ತದೆ ಮತ್ತು ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

6. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್‌ ಖಾತೆ ಮತ್ತು ಆಧಾರ ಕಾರ್ಡ್​ಗಳನ್ನು ಜೋಡಣೆ ಮಾಡಲಾಗುತ್ತದೆ.

ಈ ಕೆಳಕಂಡ ಮಾನದಂಡಗಳನ್ನು ಹೊಂದಿರುವವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

  • ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿರಬಾರದು.
  • ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದರೆ ಈ ಯೋಜನೆಗೆ ಅರ್ಹರಾಗಿರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Spread the love

About Laxminews 24x7

Check Also

ಸಾರಿಗೆ ಸಂಸ್ಥೆ ಬಸ್ ಹರಿದು ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಲಿಂಗಸೂಗೂರು ಪಟ್ಟಣದಲ್ಲಿ ನಡೆದಿದೆ.

Spread the loveರಾಯಚೂರು: ಸಾರಿಗೆ ಸಂಸ್ಥೆ ಬಸ್ ಹರಿದು ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ