Breaking News

ಐಫೋನ್ ಹಾಗೂ ದುಬಾರಿ ಬೆಲೆಯ ಫೋನ್​ಗಳನ್ನೇ ಗುರಿಯಾಗಿಸಿಕೊಂಡು ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ವಿವೇಕನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

Spread the love

ಬೆಂಗಳೂರು : ಐಫೋನ್ ಹಾಗೂ ದುಬಾರಿ ಬೆಲೆಯ ಫೋನ್​ಗಳನ್ನೇ ಗುರಿಯಾಗಿಸಿಕೊಂಡು ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ವಿವೇಕನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಬಂಧಿತ ಆರೋಪಿಗಳು ಗೋರಿಪಾಳ್ಯದ ನಿವಾಸಿಗಳಾಗಿದ್ದು, ಶಾಕೀಬ್, ಸುಹೈಲ್ ಹಾಗೂ ಮೊಹಮ್ಮದ್ ಸಕ್ಲೇನ್ ಎಂದು ಗುರುತಿಸಲಾಗಿದೆ.

ಐಷಾರಾಮಿ ಜೀವನಕ್ಕಾಗಿ ಕಳ್ಳತನದ ಅಡ್ಡದಾರಿ ಹಿಡಿದಿದ್ದ ಮೂವರು ಆರೋಪಿಗಳು ನಗರದಲ್ಲಿ ರಾತ್ರಿ ವೇಳೆ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಗುರಿಯಾಗಿಸಿಕೊಳ್ಳತ್ತಿದ್ದರು. ನಂತರ ಬೈಕಿನಲ್ಲಿ‌ ತೆರಳಿ ಐಫೋನ್​ಗಳನ್ನು‌ ಕಸಿದುಕೊಂಡು ಪರಾರಿಯಾಗುತ್ತಿದ್ದರು. ಕದ್ದ ಬಳಿಕ ಹೈದರಾಬಾದ್​ಗೆ ಐಫೋನ್ ಗಳನ್ನು ಬಿಡಿ ಭಾಗದ ವಸ್ತುಗಳಾಗಿ ವಿಂಗಡಿಸಿ ಕಳುಹಿಸುತ್ತಿದ್ದರು. ಒಂದು ಐಫೋನ್ ಕದ್ದರೆ ಸುಮಾರು 10 ಸಾವಿರ ರೂ.ಗಳು ಇಲ್ಲ, ಸ್ಮಾರ್ಟ್ ಫೋನ್ ಕದ್ದರೆ 4 ಸಾವಿರ ರೂ.ಗಳನ್ನು ಪಡೆಯುತ್ತಿದ್ದರು.

 ಪಿಸ್ತೂಲ್ ಹಾಗೂ ಜೀವಂತ ಗುಂಡುಗಳ ಸಮೇತ ಮಾರಾಟ ಮಾಡಲು ಮುಂದಾಗಿದ್ದ ಆರೋಪಿ ಬಂಧನಕಳೆದ ಐದಾರು ತಿಂಗಳಿಂದ ಮೊಬೈಲ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರೂ ಈವರೆಗೆ ಚಾಲಾಕಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿರಲಿಲ್ಲ. ಹೀಗಾಗಿ ವಿವೇಕನಗರ ಇನ್​ಸ್ಪೆಕ್ಟರ್ ಅನಿಲ್ ಕುಮಾರ್ ನೇತೃತ್ವತದ ತಂಡ ಕಾರ್ಯಾಚರಣೆ ಕೈಗೊಂಡು ಮೂವರು ಆರೋಪಿಗಳನ್ನು ಬಂಧಿಸಿದೆ‌. ಸುಲಿಗೆಕೋರರ ವಿರುದ್ಧ 10ಕ್ಕೂ ಹೆಚ್ಚು ಪೊಲೀಸ್ ಠಾಣೆಗಳಲ್ಲಿ‌ ಪ್ರಕರಣ ದಾಖಲಾಗಿದ್ದು, 109 ಮೊಬೈಲ್​ಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು‌ ಪೊಲೀಸರು ಮಾಹಿತಿ ನೀಡಿದ್ದಾರೆ.

ಕೇಂದ್ರ ವಿಭಾಗದ ಪೊಲೀಸರಿಂದ 106 ಆರೋಪಿಗಳ ಬಂಧನ : ಕಳೆದೊಂದು ತಿಂಗಳಿಂದ ಕಳ್ಳತನ, ವಂಚನೆ, ಮಾದಕವಸ್ತು ಮಾರಾಟ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ 103 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಕೇಂದ್ರ ವಿಭಾಗದ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಕಬ್ಬನ್ ಪಾರ್ಕ್, ಹಲಸೂರು ಗೇಟ್, ವಿವೇಕನಗರ, ಸಂಪಂಗಿ ರಾಮನಗರ, ಹೈಗ್ರೌಂಡ್ಸ್ ಸೇರಿದಂತೆ ಕೇಂದ್ರ ವಿಭಾಗದ ವಿವಿಧ ಪೊಲೀಸ್ ಠಾಣಾ‌ ವ್ಯಾಪ್ತಿಗಳಲ್ಲಿ 103ಕ್ಕೂ ಹೆಚ್ಚು ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಿದ್ದು, 2 ಕೋಟಿಗಿಂತ ಹೆಚ್ಚು ಮೌಲ್ಯದ ಚಿನ್ನ, ಬೆಳ್ಳಿ ಹಾಗೂ‌ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ