Breaking News

ಕರುನಾಡಿನಲ್ಲೂ ವಿವಾದಾತ್ಮಕ ಸ್ಟೇಟಸ್ ಪೋಸ್ಟ್: ನಿಪ್ಪಾಣಿಯಲ್ಲಿ ಪ್ರಕರಣ ದಾಖಲು

Spread the love

ಚಿಕ್ಕೋಡಿ : ಕೋಮು ಗಲಭೆಗೆ ಕಾರಣವಾದ ಸ್ಟೇಟಸ್​ವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಮಾಡಿದ ಹಿನ್ನೆಲೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಭಾರಿ ವಿವಾದ ಸೃಷ್ಟಿಯಾಗಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು.

ನಗರ ಈಗ ಶಾಂತ ಸ್ಥಿತಿಗೆ ಬರುವಷ್ಟರಲ್ಲಿಯೇ ಆ ವಿವಾದ ಕರ್ನಾಟಕದ ನೆಲಕ್ಕೂ ಕಾಲಿಟ್ಟಿದೆ. ಸದ್ಯಕ್ಕೆ ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ.

ನಿಪ್ಪಾಣಿ ನಗರದ ಬಾಲಕನೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಸ್ಟೇಟಸ್ ಪೋಸ್ಟ್​ ಮಾಡಿದ ಹಿನ್ನೆಲೆಯಲ್ಲಿ ನಿಪ್ಪಾಣಿ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯು ಬಾಲಾಪರಾಧಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಬಗ್ಗೆ ಪೊಲೀಸರು ತನಿಖೆ ಕೂಡಾ ಆರಂಭಿಸಿದ್ದಾರೆ.

ಕರ್ನಾಟಕ – ಮಹಾರಾಷ್ಟ್ರ ಗಡಿಯಲ್ಲಿರುವ ನಿಪ್ಪಾಣಿ ನಗರದ 16 ವರೆ ವರ್ಷದ ಬಾಲಕನೊಬ್ಬ ಸ್ಟೇಟಸ್ ಇಡುತ್ತಿದ್ದಂತೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಆತನನ್ನು ಪ್ರಶ್ನಿಸಿದ್ದು, ವಿಚಾರಣೆ ಮುಂದುವರೆಸಿದ್ದಾರೆ.

 

ಇನ್ನೊಂದೆಡೆ, ಬೆಳಗಾವಿ ಎಸ್ ಪಿ ಸಂಜೀವ್ ಪಾಟೀಲ್ ಅವರು ನಗರಕ್ಕೆ ಭೇಟಿ ನೀಡಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳುಬೇಕೆಂದು ಅಲ್ಲಿನ ನಾಗರಿಕರಲ್ಲಿ ಮನವಿ ಮಾಡಿದ್ದಾರೆ. ಹಾಗೂ ಸಮಾಜದ ಸ್ವಾಸ್ತ್ರ್ಯ ಕೆಡಿಸುವಂತಹ ಸ್ಟೇಟಸ್​ಗಳನ್ನು ಯಾರು ಕೂಡ ಇಡಬೇಡಿ ಎಂದು ಕರೆ ನೀಡಿದ್ದಾರೆ. ಒಂದು ವೇಳೆ ನಿಯಮಗಳನ್ನು ಉಲ್ಲಂಘಿಸಿದರೆ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ