Breaking News

ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಇಂದು ಚಾಲನೆ

Spread the love

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಐದು ಗ್ಯಾರಂಟಿಗಳಲ್ಲೊಂದಾದ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಇಂದು ಚಾಲನೆ ಸಿಗಲಿದೆ.‌ ವಿಧಾನಸೌಧದ ಮುಂಭಾಗ ಭಾನುವಾರ ಬೆಳಗ್ಗೆ 12 ಗಂಟೆಗೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ಧೂರಿಯಾಗಿ ಚಾಲನೆ ನೀಡಲಿದ್ದಾರೆ.

ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಶಕ್ತಿ ಯೋಜನೆಗೆ ಭಾನುವಾರ (ಜೂ. 11) ಚಾಲನೆ ಸಿಗಲಿದೆ. ಐದು ಗ್ಯಾರಂಟಿಗಳ ಪೈಕಿ ಮೊದಲನೆಯದಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಆ ಮೂಲಕ ಇಂದು ಮಧ್ಯಾಹ್ನದಿಂದ ರಾಜ್ಯದ ಮಹಿಳೆಯರು ಕೆಎಸ್‌ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ವಿಧಾನಸೌಧ ಮುಂಭಾಗದ ಗ್ರಾಂಡ್ ಸ್ಟೆಪ್ ಮುಂದೆ ಶಕ್ತಿ ಯೋಜನೆಗೆ ಅದ್ಧೂರಿಯಾಗಿ ಚಾಲನೆ ಸಿಗಲಿದೆ.

ಈ ಸಂಬಂಧ ವಿಧಾನಸೌಧದ ಮುಂದೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಜೊತೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೂಡ ಮಧ್ಯಪ್ರದೇಶದಿಂದ ಆಗಮಿಸಿ ಮಧ್ಯಾಹ್ನ ಚಾಲನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರಿಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.

ಭಾನುವಾರ ಮಧ್ಯಾಹ್ನ 1 ಗಂಟೆಯಿಂದ ರಾಜ್ಯದ ಮಹಿಳೆಯರು ಸಾಮಾನ್ಯ ಸರ್ಕಾರಿ ಬಸ್​​ಗಳಲ್ಲಿ ಉಚಿತವಾಗಿ ಓಡಾಡಬಹುದು. ಉಚಿತ ಪ್ರಯಾಣ ಯೋಜನೆಯು ಪ್ರತಿದಿನ 41.8 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಅನುಕೂಲವಾಗಲಿದೆ. 18,609 ಬಸ್‌ಗಳ ಸೇವೆಯು ಉಚಿತ ಪ್ರಯಾಣಕ್ಕೆ ಲಭ್ಯವಿದೆ. ಈ ಯೋಜನೆಗೆ ವಾರ್ಷಿಕ 4051.56 ಕೋಟಿ ರೂ. ವೆಚ್ಚವಾಗಲಿದೆ ಎಂದು ಸರ್ಕಾರ ಅಂದಾಜಿಸಿದೆ.


Spread the love

About Laxminews 24x7

Check Also

ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ

Spread the love ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ ಮೈಸೂರು: ಕನ್ನಡಕ್ಕೆ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ