Breaking News

ಕುಡಿಯುವ ನೀರಿಗಾಗಿ ಪ್ರತಿಭಟನೆ

Spread the love

ಕುಡಿಯುವ ನೀರಿಗಾಗಿ ಆಗ್ರಹಿಸಿ ವಿಜಯಪುರ ನಗರದ ಜೋರಾಪುರ ಪೇಟ್ ಬಳಿ ರಸ್ತೆ ತಡೆದು ಸ್ಥಳೀಯರು ಪ್ರತಿಭಟನೆ ನಡೆಸಿದರು. ನಗರಾದ್ಯಂತ ಕುಡಿಯುವ ನೀರಿನ ಸಮಸ್ಯೆ ಆಗಿದೆ. ತಿಂಗಳಿಗೆ ಒಮ್ಮೆ ಕುಡಿಯುವ ನೀರು ಸರಬರಾಜು ಆಗುತ್ತಿದೆ.

ಇದರಿಂದ ದೈನಂದಿನ ಜೀವನ ನಡೆಸಲು ಸಮಸ್ಯೆ ಆಗುತ್ತಿದೆ ಎಂದು ಮಹಾನಗರ ಪಾಲಿಕೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಮಹಾನಗರ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ನೇತೃತ್ವದಲ್ಲಿ ಸ್ಥಳೀಯರು ಪ್ರತಿಭಟನೆ ಮಾಡಿದರು. ಅದಕ್ಕಾಗಿ ತಕ್ಷಣವೇ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೇ, ಇದರ ಮಧ್ಯೆ ಗಾಂಧಿಚೌಕ್ ಪಿಎಸ್ಐ ರಬಕವಿ ಹಾಗೂ ಮಹಾನಗರ ಪಾಲಿಕೆ ಸದಸ್ಯ ಶಿವರುದ್ರಪ್ಪ ಬಾಗಲಕೋಟ ಮಧ್ಯೆ ಬಿರುಸಿನ ಮಾತು ಕಥೆ ನಡೆಯಿತು.

ರಸ್ತೆ ಸಂಚಾರಕ್ಕೆ ಅನುವು ಮಾಡುವಂತೆ ಪಿಎಸ್ಐ ರಬಕವಿ ಕೇಳಿದ್ರೂ ಮಾತಿಗೆ ಬಗ್ಗದ ಸದಸ್ಯ ಬಾಗಲಕೋಟ ನಡುವೆ ತುಸು ಬಿರುಸಿನ ಮಾತಿನ ಚಾಟಿ ಏರ್ಪಟ್ಟಿತು. ಇನ್ನೂ ಇದರ ಮಧ್ಯೆ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡುತ್ತಿದ್ದ ಮಹಿಳೆಯರ ಮಧ್ಯೆ ಬೈಕ್ ಸವಾರ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಆದ್ರೇ, ಇಬ್ಬರು ಮಹಿಳೆಯರು ಬೈಕ್ ಹೋಗದಂತೆ ಬೈಕ್ ಗಟ್ಟಿಗಿತ್ತಿಯಂತೆ ಬೈಕ್ ಹಿಡಿದುಕೊಂಡಿದ್ದರು. ತದನಂತರ ಪೊಲೀಸರು ಮಧ್ಯ ಪ್ರವೇಶಿಸಿ ಬೈಕ್ ಹೋಗಲು ಅನುವು ಮಾಡಿಕೊಟ್ಟರು.


Spread the love

About Laxminews 24x7

Check Also

ಚಾಮುಂಡೇಶ್ವರಿ ಸಂಜೀವಿನಿ ಮಹಿಳಾ ಸಂಘಟನೆಯ ಕಾರ್ಯಕ್ಕೆ ಒಲಿದು ಬಂತು ರಾಷ್ಟ್ರಮಟ್ಟದ ಪ್ರಶಸ್ತಿ

Spread the love ಬಾಗಲಕೋಟೆ: ಮಹಿಳೆಯರು ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಮಹಿಳಾ ಸಂಘಟನೆಯೊಂದು ಸಾಕ್ಷಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ