ಧಾರವಾಡ : ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹತ್ಯೆಗೀಡಾದ ಮಹಿಳೆ ರೂಪಾ ಸವದತ್ತಿ ಎಂದು ತಿಳಿದುಬಂದಿದೆ.
ನಿನ್ನೆ ಮನೆಯಿಂದ ಹೊರಗಡೆ ಹೋಗಿದ್ದ ರೂಪಾ ರಾತ್ರಿಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಅವರಿಗಾಗಿ ಮನೆಯವರು ಹುಡುಕಾಟ ನಡೆಸಿದ್ದರು. ಆದರೆ, ಇಂದು ಬೆಳಿಗ್ಗೆ ರೂಪಾ ಅವರ ಶವ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದೆ. ಯಾರು ಕೊಲೆ ಮಾಡಿದವರು ಹಾಗೂ ಏತಕ್ಕಾಗಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ.
Laxmi News 24×7