Breaking News

ತಿಲಾರಿ ಡ್ಯಾಂ​ನ ಹಿನ್ನೀರಿನಲ್ಲಿ ಮುಳುಗಿ ಬೆಳಗಾವಿಯ ಸಹೋದರರು ಸಾವು

Spread the love

ಬೆಳಗಾವಿ: ಪಕ್ಕದ ಮಹಾರಾಷ್ಟ್ರ ರಾಜ್ಯದ ಚಂದಗಡ ತಾಲೂಕಿನ ತಿಲಾರಿ ಡ್ಯಾಂನ ಹಿನ್ನೀರಿನಲ್ಲಿ ಮುಳುಗಿ ಬೆಳಗಾವಿ ನಗರದ ಇಬ್ಬರು ಸಹೋದರರು‌ ಮೃತಪಟ್ಟಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.

ಮೃತರು ಕುಂದಾನಗರಿಯ ಕ್ಯಾಂಪ್​ ಪ್ರದೇಶದ ರೀಹಾನ್ ಅಲ್ತಾಫ್ ಖಾನ್ (15) ಹಾಗೂ ಮುಸ್ತಫಾ ಅಲ್ತಾಫ್ ಖಾನ್ (12) ಎಂದು ಗುರುತಿಸಲಾಗಿದೆ. ವೀಕೆಂಡ್​ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಕುಟುಂಬಸ್ಥರೊಂದಿಗೆ ಅಲ್ತಾಪ್ ಖಾನ್ ಹಾಜಗೋಳಿ ಗ್ರಾಮದ ಬಳಿ ಇರುವ ತಿಲಾರಿ ಡ್ಯಾಮ್ ಕಡೆಗೆ ಪ್ರವಾಸಕ್ಕೆ ತೆರಳಿದ್ದರು. ತಿಲಾರಿ ಡ್ಯಾಮ್ ಹಿನ್ನೀರಿನ ದಡದಲ್ಲಿ ಚಾಳೊಬಾ ದೇವಸ್ಥಾನ ಕೂಡ ಇದೆ.

ಕೈ, ಕಾಲು ತೊಳೆದುಕೊಳ್ಳಲು ಡ್ಯಾಮ್‌ನಲ್ಲಿ ರಿಹಾನ್ ಮತ್ತು ಮುಸ್ತಫಾ ತೆರಳಿದ್ದಾಗ ಕಾಲು ಜಾರಿ ನೀರಿನೊಳಗೆ ಬಿದ್ದಿದ್ದಾರೆ. ನೀರಿನ ಆಳ ಹೆಚ್ಚಿದ್ದರಿಂದ ಸ್ಥಳದಲ್ಲಿದ್ದ ಕುಟುಂಬಸ್ಥರು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ಕಾಪಾಡಿ‌ ಕಾಪಾಡಿ ಎಂದು ಮಕ್ಕಳು ಕೂಗಾಡಿದ್ದಾರೆ. ಕೂಗಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಓಡಿ ಬಂದಿದ್ದಾರೆ. ಆದ್ರೂ ಸಹಿತ ಅವರನ್ನು ಕಾಪಾಡಲು ಸಾಧ್ಯವಾಗಿಲ್ಲ.

ಇನ್ನು, ಈ ಸುದ್ದಿ ಪೊಲೀಸ್​ ಇಲಾಖೆಗೆ ತಿಳಿದಿದೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಈಜುಗಾರರೊಂದಿಗೆ ಚಂದಗಡ ಪೊಲೀಸರು ಆಗಮಿಸಿ ಪತ್ತೆ ಕಾರ್ಯ ನಡೆಸಿದರು. ಭಾನುವಾರ ಬೆಳಗ್ಗೆ ಮೃತದೇಹಗಳು ಪತ್ತೆಯಾಗಿವೆ. ಚಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಮಕ್ಕಳನ್ನು ಕಣ್ಮುಂದೆ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ