Breaking News

ಕಲಬುರಗಿಯಲ್ಲಿ ಜಾತ್ರೆಗೆ ಆಗಮಿಸಿದ್ದ ದಂಪತಿ ವಿದ್ಯುತ್‌ ತಂತಿ ತಗುಲಿ ಸಾವು

Spread the love

ಕಲಬುರಗಿ: ಜಾತ್ರೆಗೆ ಆಗಮಿಸಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಮೃತಪಟ್ಟಿರುವ ಘಟನೆ ಚಿತ್ತಾಪುರ ಪಟ್ಟಣದಲ್ಲಿ ಇಂದು ನಡೆದಿದೆ. ಯಾದಗಿರಿ ಜಿಲ್ಲೆಯ ಏವೂರ ತಾಂಡಾದ ನಿವಾಸಿಗಳಾದ ಶಿವು ರಾಠೋಡ (30) ಮತ್ತು ತಾರಾಬಾಯಿ ರಾಠೋಡ (26) ಮೃತರು.

ಚಿತ್ತಾಪುರ ಪಟ್ಟಣದಲ್ಲಿ ನಡೆದ ಹಜರತ್ ಚಿತಾಶಹಾವಲಿ ದರ್ಗಾ ಜಾತ್ರಾ ಕಾರ್ಯಕ್ರಮಕ್ಕೆ ಇವರು ಆಗಮಿಸಿದ್ದರು.

ಘಟನೆ ಹೀಗೆ ನಡೆಯಿತು..: ವಿದ್ಯುತ್ ಕಂಬದ ಆಸರೆಗೆಂದು ನೆಲದಲ್ಲಿ ಹೂತಿದ್ದ ತಂತಿಗೆ ವಿದ್ಯುತ್ ಪ್ರವಹಿಸಿದೆ. ಅಲ್ಲೇ ನೀರು ನಿಂತಿದ್ದರಿಂದ ಅವಘಡ ಸಂಭವಿಸಿದೆ. ಮೊದಲು ಪತ್ನಿ ತಾರಾಬಾಯಿಗೆ ವಿದ್ಯುತ್ ಸ್ಪರ್ಶಿಸಿ ಕೆಳಗೆ ಬಿದ್ದಿದ್ದಾರೆ. ಪತ್ನಿಯನ್ನು ರಕ್ಷಿಸಲು ಹೋದ ಪತಿ ಶಿವು ರಾಠೋಡ್ ಕೂಡ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ. ಇವರ ರಕ್ಷಣೆಗೆ ಹೋಗಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಎಸ್​ಪಿ ಇಶಾ ಪಂತ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಡು ಹಂದಿ ದಾಳಿ, ವ್ಯಕ್ತಿಗೆ ಗಾಯ: ಕಬ್ಬಿಗೆ ನೀರು ಬಿಡಲು ಹೊಲಕ್ಕೆ ಹೋದ ವೇಳೆ ಕಾಡು ಹಂದಿ ದಾಳಿ ಮಾಡಿದ್ದು ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗರೂರ್ (ಬಿ) ಗ್ರಾಮದಲ್ಲಿ ನಡೆದಿದೆ. ದತ್ತು ಜಮಾದಾರ ಎಂಬವರ ಮೇಲೆ ಕಾಡು ಹಂದಿ ದಾಳಿ ಮಾಡಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ – ಪ್ರಕರಣ: ಕಲಬುರಗಿ ನಗರದ ವಿವಿಧ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ಕಾನೂನುಬಾಹಿರ ಕೃತ್ಯಗಳನ್ನು ಎಸಗಿರುವ ವ್ಯಕ್ತಿಗಳ ವಿರುದ್ಧ ಒಟ್ಟು 109 ಪ್ರಕರಣಗಳನ್ನು ಕರ್ನಾಟಕ ಪೊಲೀಸ್ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕರು ಇನ್ನೂ ಮುಂದೆ ಈ ತರಹ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ನಗರ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಅವಳಿನಗರದಲ್ಲಿನ 400 ಡ್ರಗ್ ಪೆಡ್ಲರ್ಸ್ ಹಾಗೂ ಸೇವನೆ ಮಾಡುವವರ ಪರೇಡ್

Spread the love ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ