Breaking News

ಕಾಂಗ್ರೆಸ್ ಬಿಜೆಪಿ ನಡುವೆ ಅನ್ನಭಾಗ್ಯ ಅಕ್ಕಿ ವಾರ್: ಸಿದ್ದು ಸರ್ಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು

Spread the love

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಅಕ್ಕಿ ವಿಚಾರದಲ್ಲಿ ಆರೋಪ ಪ್ರತ್ಯಾರೋಪ ನಡೆದಿದೆ.

ಸಿದ್ದರಾಮಯ್ಯ ಆರೋಪಕ್ಕೆ ರಾಜ್ಯ ಬಿಜೆಪಿ ನಾಯಕರು ಸರಣಿ ಟ್ವೀಟ್​ಗಳನ್ನು ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ. ಮಾಜಿ ಸಚಿವ ಆರ್. ಅಶೋಕ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಬೆನ್ನಲ್ಲೇ ಮಾಜಿ ಸಚಿವ ಸುನೀಲ್ ಕುಮಾರ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸಹ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಕ್ಕಿ ವಿತರಣೆ ತಾರತಮ್ಯ ಆರೋಪವನ್ನು ಟ್ವೀಟ್ ಮೂಲಕ ಟೀಕಿಸಿರುವ ಮಾಜಿ ಸಚಿವ ಸುನೀಲ್ ಕುಮಾರ್, ಸಿದ್ದರಾಮಯ್ಯನವರೇ, ನುಡಿದಂತೆ ನಡೆಯುತ್ತೇವೆ ಎಂದು ಪುಗಸಟ್ಟೆ ಪ್ರಚಾರ ತೆಗೆದುಕೊಂಡು ಈಗ ಕೇಂದ್ರ ಸರ್ಕಾರ ಅಕ್ಕಿ ಕೊಡುವಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಜಾರಿಕೊಳ್ಳುವ ಪ್ರಯತ್ನ ನಡೆಸುತ್ತೀರಾ?. ನೀವು ಮತ ರಾಜಕಾರಣಕ್ಕಾಗಿ ಪ್ರಣಾಳಿಕೆ ಸಿದ್ಧಪಡಿಸುವಾಗ‌ ಕೇಂದ್ರ ಸರ್ಕಾರದ ಜೊತೆ ಚರ್ಚೆ ನಡೆಸಿದ್ದಿರಾ?. ಈ ಹಿಂದೆ ಕೇಂದ್ರ ಸರ್ಕಾರ ರಿಯಾಯಿತಿ ದರದಲ್ಲಿ ಕೊಟ್ಟ ಅಕ್ಕಿಯನ್ನೇ ನಾನು ಉಚಿತವಾಗಿ ಕೊಟ್ಟೆ ಎಂದು ಡೋಂಗಿ ಹೊಡೆದವರು ನೀವಲ್ಲವೇ?. ಈಗ ಕೇಂದ್ರ ಸರ್ಕಾರ ಅಕ್ಕಿ ಕೊಟ್ಟಿಲ್ಲ ಎಂಬ ಸಬೂಬು ಏಕೆ? ಎಂದು ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಬುಧವಾರವೂ ಜಿಲ್ಲೆಯಎಲ್ಲ ತಾಲ್ಲೂಕುಗಳ ಶಾಲೆಗಳಿಗೆರಜೆ ಘೋಷಣೆ: ಜಿಲ್ಲಾಧಿಕಾರಿ

Spread the love ಬುಧವಾರವೂ ಜಿಲ್ಲೆಯಎಲ್ಲ ತಾಲ್ಲೂಕುಗಳ ಶಾಲೆಗಳಿಗೆರಜೆ ಘೋಷಣೆ ಬೆಳಗಾವಿ- ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿಮಳೆ ಸುರಿಯುತ್ತಿದ್ದು ಜಿಲ್ಲೆಯ ಜನಜೀವನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ