Breaking News

CAA, NRC ಕುರಿತು ನಾಟಕ ಪ್ರದರ್ಶನ: ಬೀದರ್ ಶಾಲಾ ಮಂಡಳಿ ವಿರುದ್ಧದ ದೇಶದ್ರೋಹ ಪ್ರಕರಣ ರದ್ದು

Spread the love

ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರೀಕರ ನೋಂದಣಿ (ಎನ್‌ಆರ್​​ಸಿ) ಕುರಿತು ಬೀದರ್ ಶಾಹೀನ್ ಶಾಲೆಯ ಮಕ್ಕಳು ನಾಟಕ ಪ್ರದರ್ಶನ ಮಾಡಿದ್ದ ಕುರಿತಂತೆ ಶಾಲೆಯ ಆಡಳಿತ ಮಂಡಳಿಯ ನಾಲ್ವರ ವಿರುದ್ಧ ದಾಖಲಿಸಿದ್ದ ದೇಶದ್ರೋಹ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ.

ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಶಾಹೀನ್ ಶಾಲೆಯ ಮುಖ್ಯಸ್ಥರಾದ ಅಲ್ಲಾವುದ್ದೀನ್, ಅಬ್ದುಲ್ ಖಾಲೀಕ್, ಮೊಹಮ್ಮದ್ ಬಿಲಾಲ್ ಇನಾಂದರ್ ಮತ್ತು ಮೊಹಮ್ಮದ್ ಮೆಹ್ತಾಬ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ಗೌಡರ್ ಅವರ ನೇತೃತ್ವದ ಏಕಸದಸ್ಯ ಪೀಠವು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಸಾಮಾಜಿಕ ಕಾರ್ಯಕರ್ತ ನೀಲೇಶ್ ರಕ್ಷ್ಯಾಲ್ ಎಂಬವರು ದಾಖಲಿಸಿದ್ದ ದೂರಿನ ಮೇರೆಗೆ ಬೀದರ್ ನ್ಯೂ ಟೌನ್ ಪೊಲೀಸ್​ ಠಾಣೆಯಲ್ಲಿ ಶಾಹೀನ್ ಶಾಲೆಯ ಆಡಳಿತ ಮಂಡಳಿಯ ನಾಲ್ವರು ಆರೋಪಿಗಳ ವಿರುದ್ಧ ದೇಶದ್ರೋಹದ ಆರೋಪದ ಅಡಿ ಪ್ರಕರಣ ದಾಖಲಿಸಲಾಗಿತ್ತು.

 


Spread the love

About Laxminews 24x7

Check Also

ಸರ್ಕಾರಿ ವೈದ್ಯರು, ನರ್ಸ್​ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ

Spread the loveಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್​ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ