Breaking News

ಅಕ್ರಮ ಸಂಬಂಧ:ಶಿವಮೊಗ್ಗದಲ್ಲಿ ಮಾರಾಕಾಸ್ತ್ರದಿಂದ ಕೊಚ್ಚಿ ಯುವಕನ‌ ಕೊಲೆ

Spread the love

ಶಿವಮೊಗ್ಗ : ಅಕ್ರಮ‌ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಯುವಕರ ಗುಂಪೊಂದು ಯುವಕನನ್ನು ಮಾರಾಕಾಸ್ತ್ರಗಳಿಂದ‌ ಕೊಚ್ಚಿ ಬರ್ಬರವಾಗಿ‌ ಕೊಲೆ‌ ಮಾಡಿರುವ ಘಟನೆ ಶಿವಮೊಗ್ಗದಲ್ಲಿ‌ ನಡೆದಿದೆ.

ಇಲ್ಲಿನ ಇಲಿಯಾಜ್ ನಗರದ 100 ಅಡಿ ರಸ್ತೆಯಲ್ಲಿ ಕೊಲೆ ನಡೆದಿದ್ದು, ಆಸೀಫ್(25) ಮೃತ ವ್ಯಕ್ತಿ. ಈತನನ್ನು ಜಬಿವುಲ್ಲಾ (25) ಹಾಗೂ ಇತರ ಮೂವರು ಯುವಕರು ಸೇರಿ ಕೊಲೆ ಮಾಡಿದ್ದಾರೆ.

ಮೃತ ಆಸಿಫ್, ಇಲಿಯಾಜ್‌ ನಗರದ 100 ಅಡಿ ರಸ್ತೆಯಲ್ಲಿ ಬೈಕ್​ನಲ್ಲಿ ಬಂದು ನಿಂತಾಗ ಹಿಂಬದಿಯಿಂದ ಬಂದ ನಾಲ್ವರು ಮಾರಾಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಈ ವೇಳೆ, ಆಸೀಫ್ ತಲೆಗೆ ಬಲವಾಗಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜನ ಸಂಚಾರವಿದ್ದಾಗಲೇ ಕೊಲೆ ನಡೆದಿದ್ದನ್ನು ನೋಡಿ ಸ್ಥಳೀಯರು ಗಾಬರಿಗೊಂಡಿದ್ದಾರೆ.

ಅನೈತಿಕ ಸಂಬಂಧಕ್ಕೆ ಬಲಿಯಾದ್ನಾ ಆಸೀಫ್: ಇಲಿಯಾಜ್ ನಗರದ ವಿವಾಹಿತ ಮಹಿಳೆಯೊಂದಿಗೆ ಆಸೀಫ್ ಅನೈತಿಕ ಸಂಬಂಧ ಹೊಂದಿದ್ದನು ಎನ್ನಲಾಗಿದ್ದು, ಇದೇ ವಿಚಾರಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ‌ ನೀಡಿ ಪರಿಶೀಲಿಸಿದ್ದಾರೆ. ಮೃತ ಆಸೀಫ್ ಹಾಗೂ ಜಬೀವುಲ್ಲಾ ಇಬ್ಬರು ಆಟೋ ಚಾಲಕರೆಂದು ತಿಳಿದು ಬಂದಿದೆ.

ಹೆತ್ತ ತಾಯಿ ಕೊಂದ ಮಗಳು : ಮಹಿಳೆಯೊಬ್ಬರು ಹೆತ್ತ ತಾಯಿಯನ್ನು ಕೊಂದು ಸೂಟ್ ಕೇಸ್​ನಲ್ಲಿ ಶವ ತುಂಬಿಕೊಂಡು ಸೋಮವಾರ (ಜೂನ್​ 12 ರಂದು) ರಾತ್ರಿ 11:30ಕ್ಕೆ ಮೈಕೋ ಲೇಔಟ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದ ಘಟನೆ ನಡೆದಿತ್ತು. ಸೆನಾಲಿ ಸೇನ್ (39)ಎಂಬಾಕೆ ತಮ್ಮ 71 ವರ್ಷದ ತಾಯಿ ಬೀವಾ ಪಾಲ್​ ಕೊಲೆ ಮಾಡಿ ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಳು. ಒಂದೇ ಮನೆಯಲ್ಲಿದ್ದ ಸೆನಾಲಿಯ ತಾಯಿ ಹಾಗೂ ಅತ್ತೆ ನಡುವೆ ಪ್ರತಿನಿತ್ಯ ಜಗಳವಾಗುತ್ತಿತ್ತಂತೆ. ಇದರಿಂದ ಬೇಸತ್ತಾ ಆರೋಪಿ ಮಹಿಳೆ ಸ್ವತಃ ತಾನೇ ತಾಯಿಗೆ ನಿದ್ರೆ ಮಾತ್ರೆಗಳನ್ನು ನುಂಗಿಸಿದ್ದಾಳೆ. ಬಳಿಕ ತಾಯಿ ಹೊಟ್ಟೆ ನೋವು ಎಂದಾಗ ವೇಲ್​ನಿಂದ ಆಕೆಯ ಕುತ್ತಿಗೆ ಬಿಗಿದು ಸಾಯಿಸಿದ್ದಾಳೆ


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ