Breaking News

ಶುಭ ಶುಕ್ರವಾರ.. ನಾಳೆಯಿಂದ ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಅವಕಾಶ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Spread the love

ಬೆಂಗಳೂರು : ಈ ಬಾರಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳೊಂದಿಗೆ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ ಇದೀಗ ತಾನು ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದೆ.

ಮೊದಲ ಗ್ಯಾರಂಟಿಯಾಗಿ ಮಹಿಳೆಯರಿಗೆ ಶಕ್ತಿ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿದೆ. ಕಳೆದ ಭಾನುವಾರ (ಜೂನ್ 11) ದಿಂದ ಇದು ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಸಂಚರಿಸುತ್ತಿದ್ದಾರೆ. ಇದೀಗ ಗೃಹಲಕ್ಷ್ಮಿ ಯೋಜನೆಗೆ ಮುಂದಾಗಿದೆ. ಶುಭ ಶುಕ್ರವಾರ ಎಂಬಂತೆ ನಾಳೆಯಿಂದ ಈ ಯೋಜನೆಯನ್ನು ಲೋಕಾರ್ಪಣೆ ಮಾಡಲು ಸರ್ಕಾರ ಎಲ್ಲಾ ರೀತಿಯಿಂದ ಸಜ್ಜಾಗಿದೆ.

ಈ ಕುರಿತು ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್​ ಪಕ್ಷದ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ , ” ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ನಂಬರ್ ಬೇಕು. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಕೊಡುವಂತಿಲ್ಲ. ಆಧಾರ್ ಕಾರ್ಡ್ ಓಟಿಪಿ ನೀಡಬೇಕಾಗುತ್ತದೆ ” ಎಂದರು.

“ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಉಚಿತವಾಗಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇಟ್ಟಿಲ್ಲ. ಇದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಈ ಮೂಲಕ ಮನೆಯ ಯಜಮಾನಿ ಶಕ್ತಿ ಶಾಲಿಯಾಗುತ್ತಾಳೆ. ಆಗ ಸಮಾಜದ ಶಕ್ತಿ ವೃದ್ಧಿಯಾಗುತ್ತದೆ. ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್​ನವರಿಗೆ ಈ ಯೋಜನೆಯ ಲಾಭ ಸಿಗುತ್ತದೆ ” ಎಂದು ತಿಳಿಸಿದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ