Breaking News

ಸಾರಿಗೆ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ ಎರಡೂ ಲಕ್ಷ

Spread the love

ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ ಬರೋಬರಿ ಎರಡೂ ಲಕ್ಷ ಜನ ಮಹಿಳೆಯರು ಲಾಭ ಪಡೆದುಕೊಂಡಿದ್ದಾರೆ‌.

ಶಕ್ತಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿಂತೆ ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಗುರುತಿನ ಚೀಟಿಯನ್ನು (ನಕಲು/ ಮೂಲ/ಡಿಜಿಲಾಕರ್) ತೋರಿಸಿ ಪ್ರಯಾಣಿಸಲು ಅವಕಾಶ ನೀಡುವಂತೆ ಸಂಸ್ಥೆಯ ನಿರ್ವಾಹಕರಿಗೆ ಶಕ್ತಿ ಯೋಜನೆಯ ಅನುಷ್ಠಾನಕ್ಕಿಂತ ಮುಂಚಿತವಾಗಿಯೇ ತಿಳುವಳಿಕೆ ನೀಡುತ್ತಾ ಬರಲಾಗಿದೆ.

ಅದರಂತೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳಲ್ಲಿ ಉಚಿತ ಪ್ರಯಾಣಿಸುವ ಮಹಿಳಾ ಪ್ರಯಾಣಿಕರ ಸಂಖ್ಯೆ ದಿನಾಂಕ: 11-06-2023 ರಿಂದ 14-06-2023 ರವರೆಗೆ ಪ್ರತಿದಿನ ಏರಿಕೆಯಾಗುತ್ತಾ ಬಂದಿದೆ.ಈ ರೀತಿ ಮಹಿಳಾ ಪ್ರಯಾಣಿಕರು ಮತ್ತು ಒಟ್ಟು ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾಗಿ ಅದರ ಜೊತೆಗೆ ಒಟ್ಟು ಪ್ರಯಾಣಿಕರ ಸಂಖ್ಯೆಯಲ್ಲಿ ಸಹ ಗಣನೀಯವಾಗಿ ಏರಿಕೆಯಾಗಿದ್ದು, ಕೆಲವೊಂದು ವಾಹನಗಳಲ್ಲಿ ಆಸನ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಪ್ರಯಾಣಿಕರ ವ್ಯವಸ್ಥಿತ ಪ್ರಯಾಣಕ್ಕೆ ಅವಕಾಶ ನೀಡಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಚಾಲನಾ ಸಿಬ್ಬಂದಿ, ಸಾರಿಗೆ ನಿಯಂತ್ರಕರು, ಘಟಕ ವ್ಯವಸ್ಥಾಪಕರು ಮತ್ತು ಸಂಬಂಧಪಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳು ನಿರಂತರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ