ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರು ಮಾಡುವಂತೆ ಇಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.
ಈ ಸಂಬಂಧ ಕೇಂದ್ರ ಆರೋಗ್ಯ ಮತ್ತ ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಮನ್ಸೂಖ್ ಮಂಡವೀಯ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಯಚೂರು ಜಿಲ್ಲೆಗೆ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಇದ್ದು ಆರ್ಥಿಕ ಭೌಗೋಳಿಕವಾಗಿ ಸೇರಿದಂತೆ ಹಿಂದುಳಿದ ಜಿಲ್ಲೆಯಾಗಿದೆ.
ರಾಯಚೂರಿಗೆ ಮಂಜೂರು ಅವಶ್ಯಕತೆಗಳನ್ನು ಈಗಾಗಲೇ ಸ್ಥಳೀಯ ಜನಪ್ರತಿನಿಧಿ ಹಾಗೂ ಸಣ್ಣ ನೀರಾವರಿ ಸಚಿವ ಬೋಸರಾಜು ಪತ್ರ ಬರೆದು ಮಾಹಿತಿಯನ್ನು ನೀಡಿದ್ದಾರೆ.
ಈ ಭಾಗದ ಜನತೆಯ ಆರೋಗ್ಯ ಹಿತದೃಷ್ಟಿಯಿಂದ ರಾಯಚೂರು ಜಲ್ಲೆಗೆ ಏಮ್ಸ ಅನ್ನು ರಾಯಚೂರಿಗೆ
ಮಂಜೂರು ಮಾಡುವಂತೆ ಸಿಎಂ ಮನವಿ ಮಾಡಿದ್ದಾರೆ.