Breaking News
Home / ರಾಜಕೀಯ / ಸ್ನೇಹಿತರ ಜಾಲಿ ರೈಡ್​ಗೆ ಫುಡ್ ಡೆಲಿವರಿ ಬಾಯ್​​ ಬಲಿ.. ಅಪಘಾತ ಎಸಗಿ ಮೃತದೇಹ 100 ಮೀಟರ್​ ಎಳೆದೊಯ್ದರು!

ಸ್ನೇಹಿತರ ಜಾಲಿ ರೈಡ್​ಗೆ ಫುಡ್ ಡೆಲಿವರಿ ಬಾಯ್​​ ಬಲಿ.. ಅಪಘಾತ ಎಸಗಿ ಮೃತದೇಹ 100 ಮೀಟರ್​ ಎಳೆದೊಯ್ದರು!

Spread the love

ಬೆಂಗಳೂರು: ಸ್ನೇಹಿತರ ಎಡವಟ್ಟಿಗೆ ಅಮಾಯಕ ಫುಡ್ ಡೆಲಿವರಿ ಬಾಯ್​ ಬಲಿಯಾಗಿರುವ ಘಟನೆ ತಡರಾತ್ರಿ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಆರ್​ ಆರ್​​​ ನಗರ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ.

ಜೊಮ್ಯಾಟೊದಲ್ಲಿ ಫುಡ್ ಡೆಲಿವರಿ ಮಾಡಿಕೊಂಡಿದ್ದ ಹೆಚ್.ಡಿ.ಕೋಟೆ ಮೂಲದ ಪ್ರಸನ್ನ ಕುಮಾರ್ ಮೃತ ದುರ್ದೈವಿ.

ಹೌದು ಮದ್ಯಪಾನದ ಮತ್ತಿನಲ್ಲಿದ್ದರು ಎನ್ನಲಾಗಿರುವ ಸ್ನೇಹಿತರು ಅಜಾಗರೂಕತೆಯಿಂದ ಕಾರನ್ನು ಓಡಿಸಿ ಬೈಕ್​ನಲ್ಲಿ ಹೋಗುತ್ತಿದ್ದ ಪ್ರಸನ್ನ ಕುಮಾರ್​ಗೆ ಡಿಕ್ಕಿ ಹೊಡೆದು ಆತನ ಸಾವಿಗೆ ಕಾರಣರಾಗಿದ್ದಾರೆ. ಅಪಘಾತದ ನಂತರ ರಕ್ತದ ಮಡುವಿನಲ್ಲಿ ಬಿದ್ದವನನ್ನು ಬಿಟ್ಟು ಪರಾರಿಯಾಗುತ್ತಿದ್ದ ನಾಲ್ವರ ಪೈಕಿ ಚಾಲಕ ವಿನಾಯಕ್ ಎಂಬಾತನನ್ನು ಸ್ಥಳಿಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

 ಅಪಘಾತದಿಂದ ಹಾನಿಗೊಳಗಾಗಿರುವ ಮೃತ ಪ್ರಸನ್ನ ಕುಮಾರ್​ ಚಲಾಯಿಸುತ್ತಿದ್ದ ಬೈಕ್​ಘಟನೆ ವಿವರ: ವಿಜಯನಗರ ನಿವಾಸಿಯಾದ ವಿನಾಯಕ್​ ರಾಜಾಜಿನಗರ ಮಹೀಂದ್ರ ಕಾರ್ ಶೋ ರೂಂನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವಾಗಿ ಕೆಲಸ ಮಾಡುತ್ತಿದ್ದರು. ಭಾನುವಾರ ವಿನಾಯಕ್​ಗೆ ಇನ್ಸೆಂಟಿವ್ ಹಣ ಬಂದಿತ್ತು ಎನ್ನಲಾಗಿದೆ. ಅದೇ ಹಣದಲ್ಲಿ ಸ್ನೇಹಿತರೆಲ್ಲರೂ ಸೇರಿ ಪಾರ್ಟಿ ಕೂಡಾ ಮಾಡಿದ್ದರು. ಪಾರ್ಟಿ ನಂತರ ಮದ್ಯಪಾನದ ಅಮಲಿನಲ್ಲೇ ಅಜಾಗರೂಕತೆಯಿಂದ ಕಾರಿನಲ್ಲಿ ಬಂದಿದ್ದಾರೆ. ಈ ಮಧ್ಯೆ ಒಬ್ಬ ಸ್ನೇಹಿತನನ್ನು ಡ್ರಾಪ್ ಮಾಡಲು ಆರ್.ಆರ್. ನಗರದ ಕಡೆ ತೆರಳುತ್ತಿದ್ದರು ಎನ್ನಲಾಗಿದೆ.

ಈ ವೇಳೆ ಮುಂದೆ ಬೈಕಿನಲ್ಲಿ ತೆರಳುತ್ತಿದ್ದ ಪ್ರಸನ್ನ ಕುಮಾರ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಬಳಿಕ ಕಾರನ್ನು ನಿಲ್ಲಿಸದೇ ಪ್ರಸನ್ನ ಕುಮಾರ್​ನ ದೇಹವನ್ನು ಸುಮಾರು 100 ಮೀಟರ್ ದೂರ ಕಾರಿನಡಿ ಎಳೆದೊಯ್ದಿದ್ದಾರೆ. ಆದರೂ ಸ್ಥಳದಲ್ಲಿ ಕಾರು ನಿಲ್ಲಿಸದ ಆರೋಪಿಗಳು ಎಸ್ಕೇಪ್ ಆಗಿದ್ದರು.

ಈ ವೇಳೆ ಸುಮಾರು ಒಂದು ಕಿಲೋ ಮೀಟರ್​ನಷ್ಟು ದೂರ ಚೇಸ್ ಮಾಡಿಕೊಂಡು ಬಂದ ಇತರ ವಾಹನ ಸವಾರರು ಆರ್.ಆರ್. ನಗರ ಮೆಟ್ರೊ ನಿಲ್ದಾಣದ ಬಳಿ ಕಾರನ್ನು ಅಡ್ಡಗಟ್ಟಿದ್ದಾರೆ. ಅಷ್ಟೊತ್ತಿಗಾಗಲೇ ಕಾರಿಲ್ಲಿದ್ದ ಮೂವರು ಯುವತಿಯರು, ಒಬ್ಬ ಯುವಕ ಕಾರಿಂದ ಇಳಿದು ಎಸ್ಕೇಪ್ ಆಗಿದ್ದಾರೆ.

ಈ ವೇಳೆ ಕಾರಿನ ಗಾಜು ಪುಡಿಪುಡಿಗೊಳಿಸಿದ ಸ್ಥಳೀಯರು ಚಾಲಕ ವಿನಾಯಕ್​ನನ್ನು ಥಳಿಸಿ ನಂತರ ಬ್ಯಾಟರಾಯನಪುರ ಸಂಚಾರಿ ಠಾಣಾ ಪೊಲೀಸರಿಗೆ ಒಪ್ಪಿಸಿದ್ದಾರೆ. ತಪಾಸಣೆ ವೇಳೆ ಚಾಲಕ‌ ಮದ್ಯಪಾನ ಮಾಡಿರುವುದು ಬೆಳಕಿಗೆ ಬಂದಿದೆ. ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಟರಾಯನಪುರ ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಘಾತ: ನಿನ್ನೆ (ಭಾನುವಾರ) ಬೆಳಗ್ಗೆ ಟರ್ಮಿನಲ್​ 2 ರಿಂದ ಟರ್ಮಿನಲ್​ 1 ಕ್ಕೆ ಪ್ರಯಾಣಿಕರನ್ನು ಶಿಪ್ಟ್​ ಮಾಡುತ್ತಿದ್ದ ಶೆಟಲ್​ ಬಸ್​ ಟಿ2 ಪಿಲ್ಲರ್​ಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ 15 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿತ್ತು. ಗಾಯಾಳುಗಳನ್ನು ತಕ್ಷಣ ವಿಮಾನ ನಿಲ್ದಾಣದ ಆಸ್ಟರ್​ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಪಘಾತದಲ್ಲಿ ಹೆಚ್ಚು ಗಾಯಗೊಂಡ 5-6 ಪ್ರಯಾಣಿಕರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು. ಇನ್ನು ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ.


Spread the love

About Laxminews 24x7

Check Also

ಸುಳ್ಳು ಅತ್ಯಾಚಾರ ಕೇಸ್ ಹಾಕಿದ್ದ 13 ಮಂದಿಗೆ ಮೂರುವರೆ ವರ್ಷ ಕಾರಾಗೃಹ ಶಿಕ್ಷೆ

Spread the love ಬೆಳಗಾವಿ: ಹೆಸ್ಕಾಂ ಅಧೀಕ್ಷಕ ಅಭಿಯಂತರ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದ ಹೆಸ್ಕಾಂ ಸಹಾಯಕ ಅಭಿಯಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ