Breaking News

ಕಾಂಗ್ರೆಸ್​ನವರು ಹತ್ತಲ್ಲ 15 ಕೆ.ಜಿ ಅಕ್ಕಿ ಕೊಡಬೇಕು: ಶಶಿಕಲಾ ಜೊಲ್ಲೆ

Spread the love

ಚಿಕ್ಕೋಡಿ (ಬೆಳಗಾವಿ): ಕಾಂಗ್ರೆಸ್ ನಾಯಕರು ಚುನಾವಣೆಯ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್​ದಾರರ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುವುದೆಂದು ಗ್ಯಾರಂಟಿ ಕಾರ್ಡ್​ಗಳನ್ನು ನೀಡಿದ್ದಾರೆ.

ಆದರೆ ಆ ಭರವಸೆಗಳನ್ನು ಅವರಿಗೆ ಈಡೇರಿಸಲು ಆಗುತ್ತಿಲ್ಲ. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಆರೋಪ ಹಾಕಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್​ ಪಕ್ಷದ ಈ ಪ್ರತಿಭಟನೆ ಖಂಡಿಸುತ್ತೇವೆ ಎಂದು ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿ, ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನವರು ರಾಜ್ಯದ ಜನರಿಗೆ ಹಲವಾರು ಭರವಸೆಗಳನ್ನು ನೀಡಿದ್ದಾರೆ. ಆದರೆ ಸರಿಯಾಗಿ ಅವುಗಳನ್ನು ಅನುಷ್ಠಾನ ಮಾಡದೆ ಇನ್ನೊಬ್ಬರ ಮೇಲೆ ಬೊಟ್ಟು ಮಾಡಿ, ಕೇಂದ್ರ ಸರ್ಕಾರವನ್ನು ತಪ್ಪಿತಸ್ಥರ ಸ್ಥಾನದಲ್ಲಿ ನಿಲ್ಲಿಸೋಕೆ ಪ್ರಯತ್ನ ಮಾಡುತ್ತಿದ್ದಾರೆ. ಇವತ್ತು ಅಕ್ಕಿಯ ವಿಚಾರವಾಗಿ ರಾಜ್ಯಾದ್ಯಂತ ಕಾಂಗ್ರೆಸ್​ನವರು ಪ್ರತಿಭಟನೆ ನಡೆಸಿದ್ದಾರೆ.

ಚುನಾವಣೆಯಲ್ಲಿ ಹೇಳಿದಂತೆ ಕಾಂಗ್ರೆಸ್​ನವರು 10 ಕೆಜಿ ಅಕ್ಕಿ ನೀಡಬೇಕು. ಇದರಲ್ಲಿ ಕೇಂದ್ರದಿಂದ 5 ಕೆಜಿ ಬರುತ್ತೆ, ಕೇಂದ್ರ ಸರ್ಕಾರದಿಂದ ಬರುವ ಐದು ಕೆಜಿ ಅಕ್ಕಿ ಬಿಟ್ಟು ಕಾಂಗ್ರೆಸ್​ನವರು ನುಡಿದಂತೆ ನಡೆದು ಹತ್ತು ಕೆಜಿ ಜೊತೆಗೆ ಕೇಂದ್ರ ಸರ್ಕಾರದ ಐದು ಕೆಜಿ ಸೇರಿಸಿ ಕರ್ನಾಟಕದ ಜನತೆಗೆ 15 ಕೆಜಿ ಅಕ್ಕಿ ವಿತರಣೆ ಮಾಡಬೇಕೆಂದು ಕಾಂಗ್ರೆಸ್​​ನವರಿಗೆ ಸವಾಲು ಎಸಗಿದರು.

ಕಾಂಗ್ರೆಸ್​ನವರಿಗೆ ನುಡಿದಂತೆ ನಡೆಯೋಕೆ ಆಗುತ್ತಿಲ್ಲ. ಅಕ್ಕಿ ವಿಚಾರದಲ್ಲಿ ಸುಳ್ಳು ನೆಪ ಹೇಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಹೇಳಿ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದ್ದಾರೆ. ಕಾಂಗ್ರೆಸ್​ನವರಿಗೆ ಕುಣಿಯೋದಿಕ್ಕೆ ಬರಲ್ಲ, ಆದರೆ ನೆಲ ಡೊಂಕು ಅಂತ ಹೇಳುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನೀವು 10 ಕೆಜಿ ಅಕ್ಕಿ ಕೊಡುತ್ತೇವೆ ಅಂತ ಹೇಳಿದ್ದೀರಿ, ಕೇಂದ್ರದಿಂದ ಬರುವ 5 ಕೆಜಿ ಅಕ್ಕಿ ಬಿಟ್ಟು ನೀವು ಕರ್ನಾಟಕ ಜನರಿಗೆ 10 ಕೆಜಿ + ಕೇಂದ್ರದ 5 ಕೆಜಿ ಅಕ್ಕಿ ಸೇರಿ 15 ಕೆಜಿ ನೀಡಿ, ಜನರಿಗೆ ಅಕ್ಕಿ ಕೊಡೋದು ಬಿಟ್ಟು ಸುಮ್ಮನೆ ಬಿಜೆಪಿ ಮೇಲೆ ಆಪಾದನೆ ಮಾಡುತ್ತಿದ್ದೀರಿ. ಆರೋಪ ಮಾಡುವುದನ್ನು ಬಿಟ್ಟುಬಿಡಿ ಎಂದು ಕಾಂಗ್ರೆಸ್ ವಿರುದ್ಧ ಶಶಿಕಲಾ ಜೊಲ್ಲೆ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಅಕ್ಕಿ ಕೊರತೆಯನ್ನು ನೀಗಿಸಲು ಕಾಂಗ್ರೆಸ್​ ಸರ್ಕಾರ ಅಕ್ಕಿಗೆ ಬೇಡಿಕೆ ಇಟ್ಟು ಸಲ್ಲಿಸಿರುವ ಮನವಿಯನ್ನು ಕೇಂದ್ರ ಸರ್ಕಾರ ನಿರಾಕರಿಸಿರುವುದರ ವಿರುದ್ಧ ಇಂದು ಕಾಂಗ್ರೆಸ್​ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

Spread the love ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ