Breaking News

ನಿಧಾನವಾಗಿ ಚುರುಕುಗೊಂಡ ಮುಂಗಾರು; ರಾಜ್ಯದ ಹಲವೆಡೆ ಮಳೆ

Spread the love

ಬೆಂಗಳೂರು : ಆಕಾಶದತ್ತ ಮುಖ ಮಾಡಿ ಕುಳಿತಿದ್ದ ರೈತರ ಮುಖದಲ್ಲೀದ ಸಂತಸ ಮೂಡಿದೆ. ನಿಧಾನವಾಗಿ ಮುಂಗಾರು ಚುರುಕುಗೊಳ್ಳುತ್ತಿದೆ.

ರಾಜ್ಯದ ಹಲವೆಡೆ ಬಿರುಸಾಗಿ ಮಳೆಯಾಗುತ್ತಿದೆ. ಬಿಪೊರ್‌ಜಾಯ್ ಚಂಡಮಾರುತವು ತೇವಾಂಶ ಭರಿತಮೋಡಗಳನ್ನು ಸೆಳೆದುಕೊಂಡಿದ್ದು ದುರ್ಬಲಗೊಂಡಿದ್ದ ಮುಂಗಾರು ಮಾರುತಗಳು ಈಗ ರಾಜ್ಯಾದ್ಯಂತ ಆವರಿಸುತ್ತಿವೆ.

ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಾರುಗಳು ತುಸು ಪ್ರಬಲಗೊಂಡಿದ್ದು ಮೋಡ ಕವಿದ ವಾತಾವರಣದೊಂದಿಗೆ ಅಗಾಗ್ಗೆ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ಮುಂಗಾರು ಇನ್ನಷ್ಟು ಮುನ್ನಡೆಯಲು ಪೂರಕ ವಾತಾವರಣ ಉಂಟಾಗಿರುವ ಹಿನ್ನೆಲೆಯಲ್ಲಿ ಉತ್ತರ ಒಳನಾಡಿಗೂ ಮಾರುತಗಳು ಪ್ರವೇಶಿಸಿವೆ. ಜೂನ್ 25ರಿಂದ ಈ ಭಾಗದಲ್ಲಿ ಜೋರಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ : ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಜೂನ್ 25ರಿಂದ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ. ಹೀಗಾಗಿ ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ. ಇದಲ್ಲದೆ, ಚಿತ್ರದುರ್ಗ, ಹಾಸನ, ಮಂಡ್ಯ, ತುಮಕೂರಿನಲ್ಲಿ ಜೂನ್ 22ರಂದು ಯೆಲ್ಲೋ ಅಲರ್ಟ್ ಇದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂನ್ 23ರಿಂದ ಸಾಧಾರಣ ಮಳೆ ಸುರಿಯಲಿದೆ ಎಂದು ಮಾಹಿತಿ ನೀಡಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ