Breaking News

ತೆಲಂಗಾಣದಲ್ಲೂ ಕರ್ನಾಟಕದ ಚುನಾವಣಾ ರಣತಂತ್ರ​: ‘ಕೈ’ ಹಿಡಿಯಲು BRS ನಾಯಕರು ಸಜ್ಜು

Spread the love

ನವದೆಹಲಿ: ಈ ವರ್ಷದ ಕೊನೆಯಲ್ಲಿ ತೆಲಂಗಾಣ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷ​ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. ನೆರೆ ರಾಜ್ಯ ಕರ್ನಾಟಕ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಹುಮ್ಮಸ್ಸಿನಲ್ಲಿರುವ ಕೈ ಪಡೆಯು ಕರ್ನಾಟಕದಲ್ಲಿ ಅಳವಡಿಸಿರುವ ಕಾರ್ಯತಂತ್ರವನ್ನೇ ತೆಲಂಗಾಣದಲ್ಲೂ ಅನುಸರಿಸಲು ಮುಂದಾಗಿದೆ. ಈ ಮೂಲಕ ಆಡಳಿತಾರೂಢ ಬಿಆರ್‌ಎಸ್‌ನ ಹಲವಾರು ನಾಯಕರನ್ನು ಸೆಳೆಯಲು ಯೋಜಿಸುತ್ತಿದೆ. ಕರ್ನಾಟಕದ ಗೆಲುವಿನ ಪ್ರಭಾವ ನೆರೆಯ ರಾಜ್ಯದಲ್ಲೂ ಬೀರಲಿದೆ ಎಂದು ಕಾಂಗ್ರೆಸ್ ನಾಯಕರು ಲೆಕ್ಕಾಚಾರ ಹಾಕಿದ್ದಾರೆ.

ಕರ್ನಾಟಕ ಚುನಾವಣೆಗೂ ಮುನ್ನ ಬಿಜೆಪಿ ಅಧಿಕಾರದ ಚುಕ್ಕಾಣಿ ಕಳೆದುಕೊಳ್ಳುತ್ತಿದೆ ಎಂದು ಗೊತ್ತಾಗಿ ಪ್ರಮುಖ ಬಿಜೆಪಿ ನಾಯಕರು ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದರು. ತೆಲಂಗಾಣದಲ್ಲಿ ಇದೇ ರೀತಿಯ ಪ್ರವೃತ್ತಿಯನ್ನು ಗಮನಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೊಳ್ಳುತ್ತಿದ್ದಾರೆ. ಪಕ್ಷ ಬದಲಾಯಿಸಲು ಸಿದ್ಧರಿರುವ ಪ್ರಮುಖ ಬಿಆರ್‌ಎಸ್ ನಾಯಕರೊಂದಿಗೆ ಅವರು ಕೈ ನಾಯಕರು ಈಗಾಗಲೇ ಸಂಪರ್ಕದಲ್ಲಿದ್ದಾರೆ.

ಕಾಂಗ್ರೆಸ್‌ ಸೇರಲು ಇಚ್ಛಿಸುವ ಹಲವು ನಾಯಕರು ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಆದರೆ, ಆ ನಾಯಕರು ಯಾವ ಪಕ್ಷಕ್ಕೆ ಸೇರಿದವರು ಎಂದು ನಾನು ಹೆಸರಿಸಲು ಹೋಗುವುದಿಲ್ಲ. ಮುಂದಿನ ದಿನಗಳಲ್ಲಿ ಎಲ್ಲ ವಿಷಯಗಳು ಕ್ರಮೇಣ ತೆರೆದುಕೊಳ್ಳುತ್ತವೆ. ತೆಲಂಗಾಣದಲ್ಲೂ ಕರ್ನಾಟಕದಂತಹ ಟ್ರೆಂಡ್ ರೂಪುಗೊಳ್ಳುತ್ತಿದೆ. ರಾಜ್ಯದಲ್ಲಿ ರಾಜಕೀಯ ಪರಿಸ್ಥಿತಿ ಬದಲಾಗಿದೆ. ಮುಂದಿನ ಸರ್ಕಾರ ರಚಿಸುವ ವಿಶ್ವಾಸವೂ ಇದೆ ಎಂದು ತೆಲಂಗಾಣದ ಎಐಸಿಸಿ ಉಸ್ತುವಾರಿ ಮಾಣಿಕ್​ ರಾವ್ ಳಿಸಿದರು.


Spread the love

About Laxminews 24x7

Check Also

ಹಬ್ಬದ ಅವಧಿಯಲ್ಲಿ ಗುರಿ ಮೀರಿದ ಸಾಧನೆ; 1,100 ಮೆಟ್ರಿಕ್ ಟನ್ ನಂದಿನಿ ಸಿಹಿ ಉತ್ಪನ್ನ ಮಾರಾಟ: ಸಚಿವ ಕೆ.ವೆಂಕಟೇಶ್

Spread the love ಬೆಂಗಳೂರು: ಈ ಬಾರಿ ಹಬ್ಬದ ಅವಧಿಯಲ್ಲಿ ಗುರಿ ಮೀರಿ ನಂದಿನಿ ಸಿಹಿ ತಿಂಡಿ ಉತ್ಪನ್ನಗಳ ಮಾರಾಟವಾಗಿದೆ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ