Breaking News

ಈಗಿನ ಸಚಿವ, ಶಾಸಕರು ಕಮಿಷನ್ ಕೇಳಿದರೆ ಅದನ್ನೂ ಬಹಿರಂಗ ಪಡಿಸುತ್ತೇವೆ: ಕೆಂಪಣ್ಣ

Spread the love

ಬೆಂಗಳೂರು: ನಮ್ಮ ಸರ್ಕಾರದ ಅವಧಿಯಲ್ಲಿ ಕಮಿಷನ್ ದಂಧೆಗೆ ಸಂಪೂರ್ಣ ಕಡಿವಾಣ ಹಾಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಬಾಕಿ ಇರುವ ಬಿಲ್ಲುಗಳ ಪಾವತಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕಮಿಷನ್ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದರು.

ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಆರ್ಥಿಕವಾಗಿ ಬಹಳ ಸಮಸ್ಯೆ ಆಗಿದೆ. 2013 ರಿಂದ 2018ರ ವರೆಗೆ ಇದ್ದ LOC ವ್ಯವಸ್ಥೆಯನ್ನೇ ಮತ್ತೆ ಜಾರಿಗೆ ತರಲು ಕೆಂಪಣ್ಣ ಒತ್ತಾಯ ಮಾಡಿದರು. ರಾಜ್ಯದ ಗುತ್ತಿಗೆದಾರರಿಗೆ ಪ್ರಥಮ ಮತ್ತು ಹೆಚ್ಚಿನ ಆದ್ಯತೆ ನೀಡಿ ಎಂದು ಒತ್ತಾಯಿಸಿದ್ದಾರೆ.

ಗುತ್ತಿಗೆದಾರರ ಸಮಸ್ಯೆಗಳಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಬಿಜೆಪಿ ಹಳಿ ತಪ್ಪಿಸಿರುವ ಆರ್ಥಿಕತೆಯನ್ನು ಸರಿಯಾಗಿಸಲು ಸ್ವಲ್ಪ ಸಮಯಾವಕಾಶ ಬೇಕು ಎಂದು ತಿಳಿಸಿದರು. ಜೊತೆಗೆ ಬಜೆಟ್ ಮಂಡನೆಯಾಗಬೇಕಿದೆ. ಬಜೆಟ್ ಅಧಿವೇಶನದ ನಂತರ ಬಿಬಿಎಂಪಿ ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳ ಸಭೆ ಕರೆದು ಪರಿಶೀಲಿಸಲಾಗುವುದು ಎಂದರು.

ಬಿಬಿಎಂಪಿಯಲ್ಲಿ 2000 ಕೋಟಿ ರೂ. ಹಾಗೂ ನಗರೋತ್ಥಾನ ಯೋಜನೆಯಡಿ 1500 ಕೋಟಿ ರೂ. ಬಾಕಿ ಇದೆ. ತಡೆಹಿಡಿದಿರುವ ಮೊತ್ತವನ್ನು ಪರಿಶೀಲಿಸಿ ಬಿಡುಗಡೆ ಮಾಡಬೇಕು ಹಾಗೂ ನಿರಪೇಕ್ಷಾಣಾ ಪತ್ರವನ್ನು ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿಗಳ ಬಳಿ ಕೆಂಪಣ್ಣ ಮನವಿ ಮಾಡಿದರು.

ಸಚಿವ, ಶಾಸಕರು ಕಮಿಷನ್ ಕೇಳಿದರೆ ಅದನ್ನೂ ಬಹಿರಂಗ ಪಡಿಸುತ್ತೇವೆ: ಕೆಂಪಣ್ಣ- ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ಸಭೆ ನಡೆಸಿ ಬಳಿಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾತನಾಡಿ, ಯಾರಾದರೂ ಸಚಿವರು, ಶಾಸಕರು ಈಗ ನಮ್ಮ ಬಳಿ ಕಮಿಷನ್ ಕೇಳಿದರೆ, ಅದನ್ನು ಸಹ ಬಹಿರಂಗಪಡಿಸುತ್ತೇವೆ. ಈ ಸರ್ಕಾರದವರು ಈವರೆಗೂ ಯಾರೂ ನಮ್ಮ ಬಳಿ ಕಮಿಷನ್ ಕೇಳಿಲ್ಲ. ಯಾರಾದರೂ ಕೇಳಿದರೆ, ಅದನ್ನು ಸಹ ಸಹ ವಿರೋಧಿಸುತ್ತೇವೆ ಎಂದು ತಿಳಿಸಿದರು.


Spread the love

About Laxminews 24x7

Check Also

ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು

Spread the love ಬೀದರ್ : ಡ್ಯೂಟಿಗೆ ತಡವಾಗಿ ಬಂದಿರುವುದನ್ನು ಪ್ರಶ್ನಿಸಿದ್ದ ಮಹಿಳಾ ಪಿಎಸ್‌ಐ ಮೇಲೆ ಪೊಲಿಸ್ ಪೇದೆಯೊಬ್ಬ ಹಲ್ಲೆ ಮಾಡಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ