Breaking News

KSRTC’, ‘BMTC’ ಬಸ್ ಗಳಿಗೆ ಮುಗಿಬಿದ್ದ ಮಹಿಳೆಯರು : ವೋಲ್ವೋ ಬಸ್ ಗಳಿಗೆ ‘ಶಕ್ತಿ’ ತುಂಬಿದ ಪುರುಷರು

Spread the love

ಬೆಂಗಳೂರು : ಉಚಿತ ಬಸ್ ಪ್ರಯಾಣದ ಹಿನ್ನೆಲೆ ‘KSRTC’, ‘BMTC’ ಬಸ್ ಹತ್ತಲು ಮಹಿಳೆಯರು ಮುಗಿಬಿದ್ದಿದ್ದಾರೆ. ಈ ಹಿನ್ನೆಲೆ ಸರ್ಕಾರಿ ಬಸ್ ಗಳು ಮಹಿಳೆಯರಿಂದ ತುಂಬಿ ತುಳುಕುತ್ತಿದೆ.

ಇದರಿಂದ ಬೇಸತ್ತ ಪುರುಷುರು ಬೆಂಗಳೂರಿನಲ್ಲಿ ವೋಲ್ವೋ ಬಸ್ ಗಳಿಗೆ ‘ಶಕ್ತಿ’ ತುಂಬಿದ್ದಾರೆ.

ಹೌದು, ‘KSRTC’, ‘BMTC’ ಬಸ್ ಗಳು ರಶ್ ಇರುವ ಕಾರಣ ಪುರುಷರು ವೋಲ್ವೋ ಬಸ್ ಗೆ ಮುಗಿಬಿದ್ದಿದ್ದಾರೆ. ಕಳೆದ ಒಂದು ವಾರದಲ್ಲಿ ವೋಲ್ವೋ ಮತ್ತು ವಜ್ರ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯ ಏರಿಕೆಯಾಗಿದೆ. ‘KSRTC’, ‘BMTC’ ಬಸ್ ಗಳು ಮಹಿಳೆಯರಿಂದ ತುಂಬಿ ತುಳುಕುತ್ತಿರುವುದರಿಂದ ಬೆಂಗಳೂರಿನಲ್ಲಿ ಪುರುಷರು ವಾರದಲ್ಲಿ ವೋಲ್ವೋ ಮತ್ತು ವಜ್ರ ಬಸ್ಗಳತ್ತ ಮುಖ ಮಾಡಿದ್ದಾರೆ. ಜೂನ್ ತಿಂಗಳಲ್ಲಿ 21 ದಿನಗಳ ಲೆಕ್ಕಾಚಾರದ ಪ್ರಕಾರದ ಪ್ರತಿದಿನ 1,16,000 ಪ್ರಯಾಣಿಕರು ಸಂಚರಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಉಚಿತ ಬಸ್ ಪ್ರಯಾಣದ ಹಿನ್ನೆಲೆ ಪವಿತ್ರ ಕ್ಷೇತ್ರಗಳಿಗೆ ತೆರಳಲು ಮಹಿಳೆಯರು ಮುಗಿಬಿದ್ದಿದ್ದು, ಧರ್ಮಸ್ಥಳ, ಕುಕ್ಕೆ ಸುಭ್ರಮಣ್ಯಕ್ಕೆ , ಸೌತಡ್ಕ, ಕಟೀಲು, ಉಡುಪಿ ಶ್ರೀ ಕೃಷ್ಣ ದೇವಸ್ಥಾನಗಳು ಮಹಿಳಾ ಭಕ್ತರಿಂದ ತುಂಬಿ ತುಳುಕುತ್ತಿದೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ