ಕಾಗವಾಡದಲ್ಲಿ ಭೀಕರ ರಸ್ತೆ ಅಪಘಾತ ಓರ್ವ ಸಾವು, 11 ಜನರಿಗೆ ಗಾಯ

Spread the love

ಚಿಕ್ಕೋಡಿ : ಆಟೋ ರಿಕ್ಷಾ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಇನ್ನುಳಿದ 11 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಸಮೀಪದಲ್ಲಿ ಅಪಘಾತ ಸಂಭವಿಸಿದೆ. ಆಟೋ ಪ್ರಯಾಣಿಕ ವಿನೋದ ಕಾಂಬಳೆ (20) ಮೃತರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.

ಕಾಗವಾಡ ಪೊಲೀಸ್​ ಠಾಣೆಯಲ್ಲಿ ಪ್ರಕರಣ: ಉಗಾರ ಗ್ರಾಮದಿಂದ ಐನಾಪುರ ಗ್ರಾಮಕ್ಕೆ ತೆರಳುತಿದ್ದ ಪ್ಯಾಸೆಂಜರ್ ಆಟೋದಲ್ಲಿ ಒಟ್ಟು 12 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಥಣಿ ಡಿವೈಎಸ್‌ಪಿ ಶ್ರೀಪಾದ ಜಲ್ದೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಗವಾಡ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

About Laxminews 24x7

Check Also

ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ಮುಕ್ತ ಮಹಾನಗರ ನಿರ್ಮಾಣ ಸಂಕಲ್ಪ

Spread the loveಬೆಳಗಾವಿ:ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ಮುಕ್ತ ಮಹಾನಗರ ನಿರ್ಮಾಣ ಮಾಡಲು ಪ್ರತಿಯೊಬ್ಬರು  ಕೈಜೋಡಿಸಬೇಕು. ಪ್ಲಾಸ್ಟಿಕ್ ಬಳಕೆ ಕೈಬಿಡಲು ಸ್ವಯಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ