ಬೆಂಗಳೂರು : ರಾಜ್ಯದ ಆಹಾರ ಧಾನ್ಯಗಳ ಬೆಲೆ ಇಳಿಕೆ ಮಾಡಬೇಕಾದವರು ಕೇಂದ್ರ ಸರ್ಕಾರ ಅಲ್ವಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆ ವಿಧಾನಸೌಧ ಪೂರ್ವ ಭಾಗದಲ್ಲಿರುವ ಕೆಂಪೇಗೌಡ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಆಹಾರ ಧಾನ್ಯ, ತರಕಾರಿ ಬೆಲೆ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಬೆಲೆ ಇಳಿಕೆ ಮಾಡಬೇಕಾದವರು ಯಾರು?.
ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆ ವಿಧಾನಸೌಧ ಪೂರ್ವ ಭಾಗದಲ್ಲಿರುವ ಕೆಂಪೇಗೌಡ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಆಹಾರ ಧಾನ್ಯ, ತರಕಾರಿ ಬೆಲೆ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಬೆಲೆ ಇಳಿಕೆ ಮಾಡಬೇಕಾದವರು ಯಾರು?. ಕೇಂದ್ರ ಸರ್ಕಾರ ಅಲ್ವಾ?. ನಾವು ಆ ಬಗ್ಗೆ ಗಮನ ಹರಿಸಿದ್ದೇವೆ ಎಂದು ತಿಳಿಸಿದರು.
ಕೆಂಪೇಗೌಡ ಪ್ರತಿಮೆಗೆ ಪುಷ್ಪನಮನ: ಇಂದು ಕೆಂಪೇಗೌಡರ ಜಯಂತಿ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗದ ಕೆಂಪೇಗೌಡ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ಕೆಂಪೇಗೌಡ ಜಯಂತಿಯನ್ನು ಎಲ್ಲಾ 31 ಜಿಲ್ಲೆಗಳಲ್ಲಿ ಆಚರಿಸುತ್ತಿದ್ದೇವೆ. 5 ದಿಕ್ಕುಗಳಿಂದ ಜ್ಯೋತಿ ತರಲಾಗಿದೆ. ನಮ್ಮ ಸರ್ಕಾರ ಇದ್ದಾಗ ಕೆಂಪೇಗೌಡ ಜಯಂತಿ ಆಚರಣೆ ಆರಂಭ ಮಾಡಿದ್ದೆವು. ಅದಕ್ಕೂ ಮುಂಚೆ ಸರ್ಕಾರದ ವತಿಯಿಂದ ಆಚರಣೆ ಆಗ್ತಿರಲಿಲ್ಲ ಎಂದರು.
Laxmi News 24×7