Breaking News

ಈ ಬಾರಿ ರಾಜ್ಯಕ್ಕೆ ಮುಂಗಾರು ಪ್ರವೇಶ ವಿಳಂಬ ಜಲಾಶಯದಲ್ಲಿ ಕುಸಿಯುತ್ತಿದೆ ನೀರಿನ ಮಟ್ಟ

Spread the love

ವಿಜಯಪುರ: ಈ ಬಾರಿ ರಾಜ್ಯಕ್ಕೆ ಮುಂಗಾರು ಪ್ರವೇಶ ವಿಳಂಬವಾಗಿದೆ. ಹೀಗಾಗಿ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ.

ಹೀಗಾಗಿ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ನದಿಗೆ ಒಳಹರಿವು ಕಡಿಮೆಯಾಗಿದೆ. ಕೃಷ್ಣಾ ನದಿ ಉಗಮ ಸ್ಥಾನದ ಮಹಾರಾಷ್ಟ್ರದ ಮಹಾಬಲೇಶ್ವರ ಹಾಗೂ ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯಾಗದೇ ಇರುವುದರಿಂದ ನದಿಗೆ ಒಳಹರಿವು ಇಳಿಕೆಯಾಗಿದೆ.

ಕೃಷ್ಣಾ ಭಾಗ್ಯ ನಿಗಮದ ಅಭಿಯಂತ ಹೆಚ್. ಸುರೇಶ್​ ಮಾತನಾಡಿ, “519.60 ಮೀಟರ್ ಸಾಮರ್ಥ್ಯ ಹೊಂದಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಅಣೆಕಟ್ಟೆಯಲ್ಲಿ ಸದ್ಯ 507.50 ಮೀಟರ್​ಗೆ ನೀರಿನ ಮಟ್ಟ ತಲುಪಿದೆ. 123 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಡ್ಯಾಂನಲ್ಲಿ ಬಳಕೆಗೆ ಲಭ್ಯವಿರುವುದು 2.025 ಟಿಎಂಸಿ ಮಾತ್ರ. ಇನ್ನುಳಿದ ನೀರು ಡೆಡ್ ಸ್ಟೋರೇಜ್ ರೂಪದಲ್ಲಿರುತ್ತದೆ. ಇದರ ಮಧ್ಯೆ ಡ್ಯಾಂಗೆ ಒಳ ಹರಿವು ಕಡಿಮೆಯಿದ್ದು, ಪ್ರತಿ ದಿನ 590 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ” ಎಂದರು.

ಕರ್ನಾಟಕ ಪವರ್ ಕಾರ್ಪೋರೇಷನ್ ಲಿಮಿಟೆಡ್​ಗೆ 75 ಕ್ಯೂಸೆಕ್ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ 515 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕಿದೆ. ರಾಜ್ಯ ಹಾಗೂ ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಮುಂಗಾರು ಚುರುಕುಗೊಳ್ಳದೇ ಇದ್ದರೆ ವಿಜಯಪುರ ನಗರ ಸೇರಿದಂತೆ ಇತರೆ ಭಾಗಗಳಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಸಾಲದ ಹಣಕ್ಕಾಗಿ ವ್ಯಕ್ತಿಯನ್ನ ಒತ್ತೆ ಇಟ್ಟುಕೊಂಡ ಸಾಲಗಾರ

Spread the loveವಿಜಯಪುರ, ಜೂನ್​​ 27: ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಸಾಲದ (Debt) ಹಣ (money) ವಸೂಲಿ ಮಾಡುವ ನೆಪದಲ್ಲಿ ವ್ಯಕ್ತಿಯನ್ನು ಒತ್ತೆಯಾಗಿಟ್ಟುಕೊಂಡಿರೋ ಗಂಭೀರ ಆರೋಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ