Breaking News

ವಾಯವ್ಯ ಸಾರಿಗೆಯಲ್ಲಿ2 ಕೋಟಿ ಗಡಿ ತಲುಪಿದ ಮಹಿಳಾ ‘ಶಕ್ತಿ’ ಸಂಚಾರ:

Spread the love

ಹುಬ್ಬಳ್ಳಿ: ಕಾಂಗ್ರೆಸ್​ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯಡಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ ಎರಡು ಕೋಟಿಯ ಗಡಿ ತಲುಪಿದೆ.

ಪ್ರಯಾಣದ ಟಿಕೆಟ್ ಮೌಲ್ಯ 50 ಕೋಟಿ ರೂಪಾಯಿ ದಾಟಿದೆ.

ಯೋಜನೆ ಜಾರಿಯಾಗಿ 16 ದಿನ ಕಳೆದಿದ್ದು ಮಹಿಳಾ ಪ್ರಯಾಣಿಕರು ಭರ್ಜರಿ ಸಂಚಾರ ನಡೆಸುತ್ತಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಜೂನ್ 26 ರಂದು 14,85,663 ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಪ್ರಯಾಣದ ಟಿಕೆಟ್ ಮೌಲ್ಯ ರೂ. 3,94,56,890 ಗಳಾಗಿದೆ. ಶಕ್ತಿ ಯೋಜನೆಯ ಆರಂಭದ ದಿನ ಜೂ.11ರಿಂದ ಜೂ.26 ರ ವರೆಗೆ ಒಟ್ಟು 1,99,55,040 ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಪ್ರಯಾಣದ ಟಿಕೆಟ್ ಮೌಲ್ಯ ರೂ. 50,70,47,176 ಗಳಾಗಿದೆ.

ಶಕ್ತಿ ಯೋಜನೆ ಜಾರಿಯಾದ ನಂತರ ಮಹಿಳಾ ಪ್ರಯಾಣಿಕರ ಹೆಚ್ಚಳದ ಜೊತೆಗೆ ಪುರುಷ ಪ್ರಯಾಣಿಕರ ಸಂಖ್ಯೆಯಲ್ಲಿಯೂ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರೊಂದಿಗೆ ಒಟ್ಟು ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಶಕ್ತಿ ಯೋಜನೆಯ ಜಾರಿಯ ಹಿಂದಿನ ಸೋಮವಾರ ಜೂನ್ 5 ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಬಸ್ಸುಗಳಲ್ಲಿ ಒಟ್ಟು 16,79,067 ಪ್ರಯಾಣಿಕರು ಸಂಚಾರ ಮಾಡಿದ್ದರು. ಜೂನ್ 26 ರ ಸೋಮವಾರ 14,85,663 ಮಹಿಳೆಯರು ಹಾಗೂ 11,08,905 ಪುರುಷರು ಸೇರಿದಂತೆ ಒಟ್ಟು 25,94,568 ಜನರು ಪ್ರಯಾಣ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ