Breaking News

ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದ ತಂದೆ

Spread the love

ಕೋಲಾರ: ಅಂತರ್ಜಾತಿ (Inter Caste) ಪ್ರೀತಿ ವಿಚಾರದಲ್ಲಿ ತಂದೆಯೇ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದು, ಘಟನೆಯಿಂದ ಮನನೊಂದ ಪ್ರಿಯಕರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಾಮಸಮುದ್ರ ಹೋಬಳಿ ಬೋಡಗುರ್ಕಿ ಗ್ರಾಮದ ಗೊಲ್ಲ ಸಮುದಾಯಕ್ಕೆ ಸೇರಿದ ಕೀರ್ತಿ (20) ಮತ್ತು ಪರಿಶಿಷ್ಟ ಜಾತಿ ಸಮುದಾಯದ ಗಂಗಾಧರ್ (24) ಮೃತ ದುರ್ದೈವಿಗಳಾಗಿದ್ದಾರೆ. ಇವರಿಬ್ಬರೂ ಸಹ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿ (Love) ವಿಚಾರವನ್ನು ಗಂಗಾಧರ್, ಕೀರ್ತಿಯ ತಂದೆ ಕೃಷ್ಣಮೂರ್ತಿಗೆ ತಿಳಿಸಿ ಮದುವೆ ಮಾಡಿಕೊಡಲು ಕೇಳಿದ್ದಾರೆ. ಆದರೆ ಪ್ರೀತಿಗೆ ಜಾತಿಯು ಎದುರಾಗಿ ಕೀರ್ತಿಯ ಮನೆಯವರು ಮದುವೆಗೆ ಒಪ್ಪಲಿಲ್ಲ ಎನ್ನಲಾಗಿದೆ. ಕೀರ್ತಿಯ ಪೋಷಕರು ಗಂಗಾಧರ್‌ನನ್ನು ಮರೆತುಬಿಡು ಎಂದು ಹಲವು ಬಾರಿ ಬುದ್ದಿವಾದ ಹೇಳಿದ್ದಾರೆ. ಆದರೆ ಇದ್ಯಾವುದಕ್ಕೂ ಕ್ಯಾರೇ ಎನ್ನದ ಪ್ರೇಮಿಗಳಿಬ್ಬರು ತಮ್ಮ ಪ್ರೀತಿಯನ್ನು ಮುಂದುವರೆಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ