ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ 27 ದಿನಗಳಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.
ಕಾಣಿಕೆ ಹುಂಡಿ (Hundi) ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು ಒಟ್ಟು 2,89,96,295 ರೂ. ಕಾಣಿಕೆ ಸಂಗ್ರಹವಾಗಿದೆ.ಒಟ್ಟು ಸಂಗ್ರಹವಾದ ಕಾಣಿಕೆಯಲ್ಲಿ 2,84,12,635 ರೂ. ಕರೆನ್ಸಿ ನೋಟುಗಳು ಹಾಗೂ 5,83,660 ರೂ ನಾಣ್ಯಗಳ ಸಂಗ್ರಹವಾಗಿದೆ.
57 ಗ್ರಾಂ ಚಿನ್ನ ಹಾಗೂ 910 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ. ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದೆ ಎಂದು ಗುರು ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ಮಾಹಿತಿ ನೀಡಿದ್ದಾರೆ.
Laxmi News 24×7