Home / ರಾಜಕೀಯ / ಲೋಕಾಯುಕ್ತ ದಾಳಿ ಸಮಯದಲ್ಲಿ ಎರಡು ನಕ್ಷತ್ರ ಆಮೆ ಅಧಿಕಾರಿಗಳ ಮನೆಯಲ್ಲಿ ಪತ್ತೆ

ಲೋಕಾಯುಕ್ತ ದಾಳಿ ಸಮಯದಲ್ಲಿ ಎರಡು ನಕ್ಷತ್ರ ಆಮೆ ಅಧಿಕಾರಿಗಳ ಮನೆಯಲ್ಲಿ ಪತ್ತೆ

Spread the love

ಬಾಗಲಕೋಟೆ: ಲೋಕಾಯುಕ್ತ ದಾಳಿ ಸಮಯದಲ್ಲಿ ಎರಡು ನಕ್ಷತ್ರ ಆಮೆ ಅಧಿಕಾರಿಗಳ ಮನೆಯಲ್ಲಿ ಪತ್ತೆಯಾಗಿವೆ.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆಗಿರುವ ಚೇತನಾ ಪಾಟೀಲ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ಮಾಡಲಾಗಿತ್ತು.

ದಾಖಲೆ ಹಾಗೂ ನಗದು ಹಣ ಪರಿಶೀಲನೆ ಮಾಡುವ ವೇಳೆ ಎರಡು ಆಮೆ ಪತ್ತೆಯಾಗಿವೆ. ಮನೆಯಲ್ಲಿ ಹಲವು ದಿನಗಳಿಂದ ಆಮೆ ಸಾಕಿದ್ದರು ಎನ್ನಲಾಗಿದೆ. ಅರಣ್ಯ ಕಾಯ್ದೆ ಅಡಿ ಪ್ರಾಣಿಗಳು ಸಾಕುವುದು ನಿಷೇಧ ಇದ್ದರೂ ಸಹ, ಸರ್ಕಾರಿ ಅಧಿಕಾರಿಯಾಗಿ ಕಾನೂನು ಉಲ್ಲಂಘನೆ ಮಾಡಿದ್ದಾರೆ‌ ಎಂಬ ಆರೋಪವೂ ಕೇಳಿ ಬಂದಿದೆ.

ಬೀಳಗಿ ಪಟ್ಟಣದ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣ ಶಿರೂರು ಅವರ ವಿದ್ಯಾಗಿರಿಯಲ್ಲಿರುವ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು ಎರಡು ತಂಡಗಳು ಏಕಕಾಲಕ್ಕೆ ದಾಳಿ ನಡೆಸಿವೆ. ಈ ವೇಳೆ, ಪ್ರಮುಖ ದಾಖಲೆಗಳು ಪತ್ತೆಯಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಡಿವೈಎಸ್ಪಿಗಳಾದ ಶಂಕರ ರಾಗಿ, ಪುಷ್ಪಲತಾ ನೇತೃತ್ವದ ತಂಡಗಳಿಂದ ದಾಳಿ ನಡೆಸಲಾಗಿದೆ.

ಅಧಿಕಾರಿಗಳ ಮನೆಗಳ ಜೊತೆಗೆ ಕಚೇರಿಗಳ ಮೇಲೂ ದಾಳಿ ಮಾಡಿ, ಸಿಬ್ಬಂದಿಗಳ ವಿಚಾರಣೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ‌. ಬಾಗಲಕೋಟೆ, ಬೀಳಗಿ ಕಚೇರಿಗಳ‌ ಮೇಲೂ ದಾಳಿ ಮಾಡಲಾಗಿದೆ. ವಿದ್ಯಾಗಿರಿಯ 18ನೆ ಕ್ರಾಸ್ ನಲ್ಲಿರುವ ಕೃಷ್ಣ ಶಿರೂರು ಮನೆ ಹಾಗೂ ವಿದ್ಯಾಗಿರಿಯ ಅಕ್ಕಿಮರಡಿ ಲೇ ಔಟ್​ನಲ್ಲಿರುವ ಚೇತನಾ ಪಾಟೀಲ ಮನೆ ಮೇಲೆ ದಾಳಿ ಈ ನಡೆದಿದೆ.


Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ