Breaking News

ಮೂವತ್ತು ರೂಪಾಯಿ ಕೊಟ್ಟರೆ ಜನರಿಗೆ ಎರಡೂವರೆ ಕೆ.ಜಿ ಅಕ್ಕಿ ಮಾತ್ರ ಬರುತ್ತದೆ: ಬೊಮ್ಮಾಯಿ

Spread the love

ಬೆಂಗಳೂರು: ಇವರು ಮೂವತ್ತು ರೂಪಾಯಿ ಕೊಟ್ಟರೆ ಜನರಿಗೆ ಎರಡೂವರೆ ಕೆ.ಜಿ ಅಕ್ಕಿ ಮಾತ್ರ ಬರುತ್ತದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಕ್ಕಿ ಬದಲಿಗೆ ಹಣ ನೀಡುವ ನಿರ್ಧಾರದ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್​ನವರು ಹತ್ತು ಕೆ.ಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದರು. ಈಗ ಅಕ್ಕಿ ಬದಲು 34 ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆ.ಜಿ ಅಕ್ಕಿ ಮಾತ್ರ ಬರುತ್ತದೆ ಎಂದರು.

ಕಾಂಗ್ರೆಸ್​ನವರು ಚುನಾವಣೆ ಸಂದರ್ಭದಲ್ಲಿ ಹತ್ತು ಕೆ.ಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಈಗ ಐದು ಕೆ.ಜಿ ಕೊಡುವುದಾಗಿ ಹೇಳುತ್ತಿದ್ದಾರೆ. ಅವರು ಮಾತಿಗೆ ತಪ್ಪುತ್ತಿದ್ದಾರೆ. ಎಷ್ಟಾದರೂ ಆಗಲಿ ನಾವು ಅಕ್ಕಿಯನ್ನೇ ಕೊಡುತ್ತೇವೆ ಅಂತ ಹೇಳಿದ್ದರು. ಈಗ ಹಣ ಹಾಕುತ್ತೇವೆ ಅಂತ ಹೇಳುತ್ತಿದ್ದಾರೆ. ಇವರು ಮತ್ತೆ ಮಾತು ತಪ್ಪಿದ್ದಾರೆ ಎಂದು ಆರೋಪಿಸಿದರು. ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ ಅಕ್ಕಿಗೆ ಐವತ್ತರಿಂದ ಆರವತ್ತು ರೂಪಾಯಿ ಬೆಲೆ ಇದೆ ಎಂದು ಹೇಳಿದರು.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ