Breaking News

ಎರಡನೇ ಆಷಾಢ ಶುಕ್ರವಾರ: ಸಿಂಹವಾಹಿನಿ ಅಲಂಕಾರದಲ್ಲಿ ಚಾಮುಂಡೇಶ್ವರಿ ದೇವಿ, ದರ್ಶನಕ್ಕೆ ಭಕ್ತರ ದಂಡು

Spread the love

ಮೈಸೂರು : ಇಂದು ಎರಡನೇ ಆಷಾಢ ಶುಕ್ರವಾರವಾದ ಪ್ರಯುಕ್ತ ನಾಡ ಅಧಿದೇವತೆ ಚಾಮುಂಡಿ ತಾಯಿಯ ಮೂಲ ಮೂರ್ತಿಗೆ ವಿಶೇಷ ಸಿಂಹವಾಹಿನಿ ಅಲಂಕಾರ ಮಾಡಲಾಗಿದ್ದು, ಬೆಳಗ್ಗೆಯಿಂದಲೇ ನಾಡಿನ ವಿವಿಧ ಕಡೆಗಳಿಂದ ಆಗಮಿಸಿದ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ.

ಆಷಾಢ ಶುಕ್ರವಾರದ ನಿಮಿತ್ತ ದೇವಸ್ಥಾನಕ್ಕೆ ವಿಶೇಷ ಅಲಂಕಾರ ಮಾಡಲಾಗಿದೆ. ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆಯಲು ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಭಕ್ತರು ಅನುಕೂಲಕ್ಕಾಗಿ ನಗರದ ಲಲಿತ ಮಹಲ್ ಮೈದಾನದಿಂದ ಚಾಮುಂಡಿ ಬೆಟ್ಟಕ್ಕೆ ಬೆಳಗ್ಗೆ 5 ಗಂಟೆಯಿಂದಲೇ ಉಚಿತ ಬಸ್ ಸೇವೆ ಒದಗಿಸಲಾಗಿದ್ದು, ರಾತ್ರಿ 8.30 ರವರೆಗೆ ಉಚಿತ ಬಸ್ ಸೇವೆ ಇರಲಿದೆ. ಜೊತೆಗೆ, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್​ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಡಿಸಿಪಿ ನೇತೃತ್ವದಲ್ಲಿ ಹೆಚ್ಚಿನ ಭದ್ರತೆಗೆ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಸಂಚಾರಿ ಪೊಲೀಸರು ಸಂಚಾರಿ ದಟ್ಟಣೆ ನಿಯಂತ್ರಿಸುತ್ತಿದ್ದಾರೆ.

ಸಿಂಹವಾಹಿನಿ ಅಲಂಕಾರದಲ್ಲಿ ನಾಡ ಅಧಿದೇವತೆ : ಎರಡನೇ ಆಷಾಢ ಶುಕ್ರವಾರದ ಹಿನ್ನೆಲೆ ಮೂಲ ಚಾಮುಂಡೇಶ್ವರಿ ತಾಯಿಗೆ ಸಿಂಹವಾಹಿನಿ ಅಲಂಕಾರ ಮಾಡಲಾಗಿದೆ. ಉತ್ಸವ ಮೂರ್ತಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು, ಬೆಳಗಿನ ಜಾವ 3 ಗಂಟೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳು ಆರಂಭವಾಗಿವೆ. ಬೆಳಗ್ಗೆ 3 ಗಂಟೆಗೆ ಚಾಮುಂಡೇಶ್ವರಿ ತಾಯಿಗೆ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ ನಂತರ ಮಹಾ ಮಂಗಳಾರತಿ ನೆರವೇರಿದೆ. ಬೆಳಗಿನ ಜಾವ 5.30 ಕ್ಕೆ ತಾಯಿಯ ದರ್ಶನವನ್ನು ಪಡೆಯಲು ಭಕ್ತರಿಗೆ ಅವಕಾಶ ಕಲ್ಪಿಸಲಾಯಿತು. ರಾತ್ರಿ 9.30 ರವರೆಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ