Breaking News

ರಾಜ್ಯ ಸರ್ಕಾರ ಹಿಂದೂ ವಿರೋಧಿ ನಡೆ ಕೈಬಿಡದಿದ್ದರೆ ಉಪವಾಸ ಸತ್ಯಾಗ್ರಹ: ಸ್ವಾಮೀಜಿಗಳ ಧರ್ಮಸಭೆಯಲ್ಲಿ ನಿರ್ಧಾರ

Spread the love

ಮಂಗಳೂರು: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಡೆ ಕೈಬಿಡದಿದ್ದರೆ ಸಂತರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ಮಂಗಳೂರಿನಲ್ಲಿ ನಡೆದ ಸ್ವಾಮೀಜಿಗಳ ಧರ್ಮಸಭೆಯಲ್ಲಿ ‌ನಿರ್ಧರಿಸಲಾಗಿದೆ.

ಬಾಳಂಭಟ್ ಸಭಾಂಗಣದಲ್ಲಿ ನಡೆದ ಧರ್ಮಸಭೆಯಲ್ಲಿ ಕರಾವಳಿಯ ಸಂತ ಸಮೂಹದಿಂದ ಈ ಬಗ್ಗೆ ನಿರ್ಣಯ ಅಂಗೀಕರಿಸಲಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ಕಾಯ್ದೆ ವಾಪಸ್​ ನಿರ್ಧಾರ ಕೈಬಿಡುವಂತೆ ಸ್ವಾಮೀಜಿಗಳು ಆಗ್ರಹಿಸಿದ್ದಾರೆ.

ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಒಡಿಯೂರು ಮಠದ ಗುರುದೇವಾನಂದ ಸ್ವಾಮೀಜಿ, ಮಾಣಿಲ ಮಠದ ಮೋಹನದಾಸ ಸ್ವಾಮೀಜಿ, ಕೇಮಾರು ಮಠದ ಈಶ ವಿಠಲ ಸ್ವಾಮೀಜಿ ಸೇರಿ, ಚಿಲಬಿ ಓಂಶ್ರೀ ಮಠ, ಚಿತ್ರಾಪುರ ಮಠದ ಸ್ವಾಮೀಜಿ, ಕೊಂಡೆವೂರು ಮಠದ ಸ್ವಾಮೀಜಿ ಸೇರಿದಂತೆ ಹಲವು ಸಂತರು ಹಾಗೂ ವಿಎಚ್‌ಪಿ, ಭಜರಂಗದಳ ಹಾಗೂ ಆರ್‌ಎಸ್‌ಎಸ್ ಪ್ರಮುಖರು ಭಾಗಿಯಾಗಿದ್ದರು. ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಭೆ ನಡೆಯಿತು.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಡಿಯೂರು ಗುರುದೇವಾನಂದ ಸ್ವಾಮೀಜಿ ಹಾಗೂ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, “ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು ಎಂದು ಸರಕಾರಕ್ಕೆ ಮನವಿ ಮಾಡಲು ನಿರ್ಧಾರ ಮಾಡಲಾಗಿದೆ. ವಾಪಸ್ ಪಡೆದರೆ ಸಮಾಜದಲ್ಲಿ ಸಂಘರ್ಷ ಆಗಬಹುದು. ಗೋ ಹತ್ಯೆ ನಿಷೇಧ ಕಾಯ್ದೆ ಮತ್ತು ಮತಾಂತರ ನಿಷೇಧ ಕಾಯ್ದೆ ರದ್ದತಿ ನಿರ್ಧಾರ ಖಂಡನೀಯ. ಗೋಹತ್ಯೆ‌ ನಿಷೇಧ ರದ್ದು ಮಾಡಿದ್ರೆ ಗೋ ಸಂತತಿ ನಾಶವಾಗಲಿದೆ” ಎಂದು ಎಚ್ಚರಿಸಿದರು.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ