Breaking News

ರಾಜ್ಯದಲ್ಲಿ ಇನ್ನೆರಡು ದಿನ ಲಾಕ್‍ಡೌನ್ 3.0 ಮುಂದುವರಿಕೆ

Spread the love

ಬೆಂಗಳೂರು : ಸೋಮವಾರದಿಂದ ಜನಜೀವನ ಸಹಜ ಸ್ಥಿತಿಗೆ ಬರಬಹುದೆಂಬ ನಿರೀಕ್ಷೆ ಮತ್ತೆ ಹುಸಿಯಾಗಿದ್ದು, ರಾಜ್ಯದಲ್ಲಿ ಎರಡು ದಿನ ಲಾಕ್​ಡೌನ್​ ಮುಂದುವರಿಸಿ ಸರ್ಕಾರ ಆದೇಶ ನೀಡಿದೆ.

ಈ ಹಿಂದಿನ ಮಾರ್ಗಸೂಚಿಗಳಂತೆ ಮೇ 19ರವರೆಗೆ ಬಸ್, ಆಟೋ, ಟ್ಯಾಕ್ಸಿ ಸಂಚಾರವಿರಲ್ಲ ಮತ್ತು ಮಾಲ್, ಥಿಯೇಟರ್, ಶಾಲಾ, ಕಾಲೇಜ್, ದೇವಸ್ಥಾನ, ಮಸೀದಿ, ಚರ್ಚ್ ಈ ಹಿಂದಿನಂತೆ ಬಂದ್ ಆಗಲಿವೆ.

ಮುಂದಿನ ಆದೇಶ ಬರುವ ತನಕ ಅಥವಾ ಮೇ 19ರ ರಾತ್ರಿ 12 ಗಂಟೆಯ ತನಕ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಲಾಗಿದೆ.
ಇನ್ನು ಮೇ 19ರವರೆಗೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಹಿರಿಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸರ್ಕಾರ ಆದೇಶ ನೀಡಿದೆ.

ಮೂರನೇ ಹಂತದ ಲಾಕ್‌ಡೌನ್‌ ಮೇ 17ರಂದು ಮುಕ್ತಾಯವಾಗಲಿದ್ದು, ನಾಲ್ಕನೇ ಹಂತದ ಲಾಕ್‌ಡೌನ್‌ ಕುರಿತು ಇಂದು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಬೇಕಿತ್ತು. ಆದರೆ, ಇದುವರೆಗು ಕೇಂದ್ರದಿಂದ ಯಾವುದೇ ಸೂಚನೆ ಸಿಗದ ಹಿನ್ನೆಲೆ ರಾಜ್ಯ ಸರ್ಕಾರ ಎರಡು ದಿನ ಕಾಲ ಲಾಕ್‌ಡೌನ್‌ ವಿಸ್ತರಿಸಿದೆ.

ಕೋವಿಡ್-19 ನಿಯಂತ್ರಣಕ್ಕೆ ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಮೂರನೇ ಹಂತದಲ್ಲಿನ ಮಾರ್ಗಸೂಚಿಗಳಲ್ಲಿನ ಕ್ರಮಗಳನ್ನು ಕಡ್ಡಾಯವಾಗಿ ಮುಂದಿನ ಆದೇಶದವರೆಗೆ ಅಥವಾ ಮೇ 19ರ ಮಧ್ಯರಾತ್ರಿ 12 ಗಂಟೆಯವರೆಗೂ ಪಾಲಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರು ಆಗಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಯಥಾಸ್ಥಿತಿ ಮುಂದುವರೆಸಲು
ಇಲಾಖೆಗಳಿಗೆ, ಡಿಸಿಗಳಿಗೆ, ಜಿಲ್ಲಾ ಎಸ್ಪಿಗಳಿಗೆ ಸೂಚನೆ ನೀಡಲಾಗಿದೆ. ಕೇಂದ್ರದಿಂದ ಲಾಕ್‍ಡೌನ್ 4.0 ಮಾರ್ಗಸೂಚಿ ಪ್ರಕಟವಾದ ಬೆನ್ನಲ್ಲೇ ರಾಜ್ಯ ಸರ್ಕಾರ ತನ್ನ ಆದೇಶವನ್ನು ಹಿಂಪಡೆಯಲಿದೆ..

ಕೇಂದ್ರ ಮಾರ್ಗಸೂಚಿ ವಿಳಂಬ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಎರಡು ದಿನ ಅಥವಾ ಮುಂದಿನ ಆದೇಶದವರೆಗೆ ಯಥಾಸ್ಥಿತಿ ಮುಂದುವರಿಸಲು ರಾಜ್ಯ ಸರ್ಕಾರದಿಂದ ಆದೇಶ ಪ್ರಕಟವಾಗಿದೆ. ಬೆಳಗ್ಗೆಯಿಂದಲೂ ಕೇಂದ್ರದ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಎದುರು ನೋಡುತ್ತಿತ್ತು.

ಮಾರ್ಗಸೂಚಿಗಳ ಪ್ರಕಟ ವಿಳಂಬ ಹಿನ್ನೆಲೆಯಲ್ಲಿ ತನ್ನ ವಿವೇಚನೆ ಅಧಿಕಾರ ಬಳಸಿ ಯಥಾಸ್ಥಿತಿ ಮುಂದುವರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೇ 31ರವರೆಗೆ ಲಾಕ್‍ಡೌನ್ ವಿಸ್ತರಣೆ


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ