Breaking News

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ, 30 ಮಂದಿ ಅಂದರ್​

Spread the love

ಮೈಸೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಿದ ಸಿಸಿಬಿ ಪೊಲೀಸರು ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಬೋಗಾದಿ, ಬಸವೇಶ್ವರ ನಗರದ ಆಶ್ರಯ ಮನೆಯ ಮೇಲೆ ದಾಳಿ ಮಾಡಿದ ವೇಳೆ ಸಿಸಿಬಿ ಪೊಲೀಸರು ಬಂಧಿತರಿಂದ ನಾಲ್ಕು ಸಾವಿರ ರೂ. ವಶಕ್ಕೆ ಪಡೆದಿದ್ದಾರೆ. ಇವರು ವೇಶ್ಯಾವಾಟಿಕೆ ನಡೆಸುವುದಲ್ಲದೇ, ಗಿರಾಕಿ ಮತ್ತು ಹುಡುಗಿಯರ ಫೋನ್ ಸಂಪರ್ಕವಿಟ್ಟುಕೊಂಡು, ಅವರುಗಳಿಗೆ ಬೇಕಾದ ಸ್ಥಳಗಳಿಗೆ ಹುಡುಗಿಯರನ್ನು ಫೋನ್ ಸಂಪರ್ಕಿಸುವ ಮೂಲಕ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ನಗರದ ಸಿಸಿಬಿ ಘಟಕದ ಎಸಿಪಿ ಎಸ್.ಎನ್. ಸಂದೇಶ್‌ಕುಮಾರ್ ಮಾರ್ಗದರ್ಶನದಲ್ಲಿ ದಾಳಿ ಮಾಡಿದ ಸಿಸಿಬಿ ಘಟಕದ ಇನ್ಸ್‌ಪೆಕ್ಟರ್ ಎ. ಮಲ್ಲೇಶ್, ಎಸ್‌ಐ ಪ್ರತಿಭಾ ಜಂಗವಾಡ, ರಾಜು ಕೋನಕೇರಿ, ಎಎಸ್‌ಐ ಟಿ. ಸತೀಶ್, ಸಿಬ್ಬಂದಿ ಪುರುಷೋತ್ತಮ, ಮಂಜುನಾಥ್, ಅರುಣ್‌ಕುಮಾರ್, ರಘು, ಮಮತ ಎನ್. ಜಿ ಹಾಗೂ ಕೆ.ಜಿ. ಶ್ರೀನಿವಾಸ ತಂಡ ವೇಶ್ಯಾವಾಟಿಕೆ ದಂಧೆ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.


Spread the love

About Laxminews 24x7

Check Also

ಸಚಿವ ತಿಮ್ಮಾಪುರ ವಜಾ ಮಾಡದಿದ್ದರೆ ಸಿಎಂಗೆ 85% ಕಮಿಷನ್ ಹೋಗಿದೆ ಎಂದರ್ಥ: ಆರ್. ಅಶೋಕ್

Spread the loveಬೆಂಗಳೂರು: ಸಿದ್ದರಾಮಯ್ಯನವರ ನಿದ್ದೆ ಸರ್ಕಾರ ಇದು. ಭ್ರಷ್ಟಾಚಾರದ ಹೊಳೆಯಲ್ಲಿ ಮಿಂದು ಮೇಯುತ್ತಿದೆ. ಅಬಕಾರಿ ಸಚಿವ ತಿಮ್ಮಾಪುರ ಅವರನ್ನು ವಜಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ