Breaking News

ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆ ಲಭ್ಯ: ಸೆ.30 ರೊಳಗೆ ಪಾವತಿಸುವಂತೆ ಮೂರು ತಿಂಗಳು ಕಾಲಾವಕಾಶ

Spread the love

ಬೆಂಗಳೂರು: ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆಯ ಪ್ರಯೋಜನ ಸಿಗಲಿದೆ ಎಂದು ಇಂಧನ ಇಲಾಖೆ ಸ್ಪಷ್ಟಪಡಿಸಿದೆ. ಇದೇ ವೇಳೆ ಹಿಂಬಾಕಿಯನ್ನು ಸೆ.30 ರೊಳಗೆ ಪಾವತಿಸುವಂತೆ ಮೂರು ತಿಂಗಳು ಕಾಲಾವಕಾಶ ನೀಡಲಾಗಿದೆ.

 

ಜುಲೈ 25ರೊಳಗೆ ಯೋಜನೆಗೆ ನೋಂದಾಯಿಸಿಕೊಂಡಲ್ಲಿ ಆಗಸ್ಟ್ ತಿಂಗಳ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ದೊರಕಲಿದೆ. ಹಾಗೆಯೇ, ಜುಲೈ 25 ರಿಂದ ಆಗಸ್ಟ್ 25ರೊಳಗೆ ನೋಂದಾಯಿಸಿದಲ್ಲಿ ಸೆಪ್ಟೆಂಬರ್ ತಿಂಗಳ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ಸಿಗಲಿದೆ. (ಬಿಲ್ಲಿಂಗ್ ಅವಧಿ ಪ್ರತಿ ತಿಂಗಳ 25 ನೇ ತಾರೀಖಿನಿಂದ ಮುಂದಿನ ತಿಂಗಳ 25 ತಾರೀಖಿನವರೆಗೆ) ಎಂದು ಮಾಹಿತಿ ನೀಡಿದೆ.

ಈ ಪ್ರಯೋಜನ ಪಡೆಯಲು ನಿಮ್ಮ ವಿದ್ಯುತ್ ಬಳಕೆಯು ಸರಾಸರಿ 200 ಯೂನಿಟ್ ಮೀರಿರಬಾರದು. ಗೃಹ ಜ್ಯೋತಿ ಯೋಜನೆಗೆ ಗ್ರಾಹಕರು ಜುಲೈ 25ರ ನಂತರ ಅರ್ಜಿ ಸಲ್ಲಿಸಿದರೆ ಅವರಿಗೆ ಆಗಸ್ಟ್ ತಿಂಗಳಲ್ಲಿ ಬರುವ ಬಿಲ್​ನಲ್ಲಿ ಪ್ರಯೋಜನ ಸಿಗುವುದಿಲ್ಲ. ಆದರೆ ಯೋಜನೆಯ ಪ್ರಯೋಜನವನ್ನು ಅವರು ಸೆಪ್ಟೆಂಬರ್ ತಿಂಗಳಲ್ಲಿ ಪಡೆಯಲಿದ್ದಾರೆ ಎಂದು ತಿಳಿಸಲಾಗಿದೆ. ಈ ಯೋಜನೆಯ ನೋಂದಣಿಗೆ ಅಂತಿಮ ಗಡುವು ನೀಡಿಲ್ಲ. ಯಾವಾಗ ಬೇಕಾದರೂ ನೋಂದಣಿ ಮಾಡಿಕೊಳ್ಳಬಹುದು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ