ಬೆಳಗಾವಿ ತಾಲೂಕಿನ ಗಜಪತಿ ಗ್ರಾಮದಲ್ಲಿ ಬೆಳಗ್ಗೆ ಬಸ್ ನಿಲ್ಲಿಸದ ಕಾರಣ ಆಕ್ರೋಶಗೊಂಡ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬಸ್ ತಡೆದು ಪ್ರತಿಭಟನೆ ನಡೆಸಿದರು. ಹಾಗೂ ಗಜಪತಿ ಗ್ರಾಮಕ್ಕೆ ಪ್ರತ್ಯೇಕ ಬಸ್ ಬಿಡುವಂತೆ ಒತ್ತಾಯಿಸಿದರು.
ಬೆಳಗಾವಿ ತಾಲೂಕಿನ ಗಜಪತಿ ಗ್ರಾಮದಲ್ಲಿ ಬೆಳಗ್ಗೆ ಬಸ್ ನಿಲ್ಲಿಸದ ಕಾರಣ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮುಂಜಾನೆಯೇ ವಿದ್ಯಾರ್ಥಿಗಳು ಬಸ್‌ಗಾಗಿ ಕಾಯುತ ನಿಲ್ಲುತ್ತಾರೆ. ಆದರೆ ಹಿಂದಿನ ಗ್ರಾಮದಿಂದ ಮುಗುಳಿಗಲ್ ,ಬಿಡಿ ಗ್ರಾಮದಿಂದ ಬೆಳಗಾವಿಗೆ ಹೋಗುವ ಬಸ್ ಗಳು ತುಂಬಿರುವುದರಿಂದ ಬಸ್ ಚಾಲಕರು ಗಜಪತಿ ಗ್ರಾಮದಲ್ಲಿ ಬಸ್ ನಿಲ್ಲಿಸುವುದಿಲ್ಲ. ಇದರಿಂದ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತಿದೆ
Laxmi News 24×7