ಕ್ಷುಲ್ಲಕ ಕಾರಣಕ್ಕೆ 10ನೇ ತರಗತಿ‌ ವಿದ್ಯಾರ್ಥಿ ಆತ್ಮಹತ್ಯೆ

Spread the love

ಕಲಬುರಗಿ: ಹತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಕೊರಿಕೋಟಾ ಗ್ರಾಮದಲ್ಲಿ ನಡೆದಿದೆ.

ಕೆಲ ಯುವಕರು ಸೇರಿ ವಿನಾಃಕಾರಣ ಕಿರುಕುಳ ನೀಡಿ, ಹಲ್ಲೆ ಮಾಡಿದ್ದಕ್ಕೆ ಮನನೊಂದ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಕುರಿಕೋಟಾ ಗ್ರಾಮದ ಪ್ರಶಾಂತ ಅಷ್ಟಗಿ (16) ಆತ್ಮಹತ್ಯೆಗೆ ಮಾಡಿಕೊಂಡ ಬಾಲಕ. ಈತ ಅವರಾದ (ಬಿ) ಪ್ರೌಢ ಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದ ಎಂದು ತಿಳಿದು ಬಂದಿದೆ. ‘ಕುರಿಕೋಟಾ ಗ್ರಾಮದ ಯುವಕ ಸೋಹಿಲ್ ಹಾಗೂ ಆತನ ಕಲಬುರಗಿಯ ಕೆಲ ಸ್ನೇಹಿತರು ಸೇರಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿ ಹಲ್ಲೆ ಮಾಡಿದ್ದರು. ಇದರಿಂದ ಮನನೊಂದ ಪ್ರಶಾಂತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರೋಪಿತರ ವಿರುದ್ಧ ಕ್ರಮ‌ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಮಹಾಗಾಂವ ಪೊಲೀಸ್​​ ಠಾಣೆಯಲ್ಲಿ ಮೃತ ಬಾಲಕನ ತಂದೆ ದೂರು ದಾಖಲಿಸಿದ್ದಾರೆ.

 


Spread the love

About Laxminews 24x7

Check Also

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Spread the loveಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ