ಮಂಗಳೂರು: ನಗರದಲ್ಲಿ ಮಧ್ಯಾಹ್ನದ ಬಳಿಕ ಸುರಿದ ಭಾರೀ ಮಳೆಗೆ ಪಂಪ್ ವೆಲ್ ಸಂಪೂರ್ಣ ಜಲಾವೃತಗೊಂಡಿದೆ.
ಮಧ್ಯಾಹ್ನ 3 ಗಂಟೆಯ ಬಳಿಕ ಮಂಗಳೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. 2 ಗಂಟೆಗಳಲ್ಲಿ ಸುರಿದ ಧಾರಾಕಾರ ಮಳೆಗೆ ಪಂಪ್ವೆಲ್ ಫ್ಲೈಓವರ್ ಅಡಿಭಾಗ ಸಂಪೂರ್ಣ ಜಲಾವೃತಗೊಂಡಿದೆ. ಎಡ ಬಿಡದೇ ಮಳೆ ಸುರಿಯುತ್ತಿದ್ದು, ಫ್ಲೈಓವರ್ ಅಡಿ ನಿಂತ ನೀರಿನಿಂದಾಗಿ ವಾಹನ ಸಂಚಾರಕ್ಕೆ ಭಾರೀ ತೊಂದರೆಯುಂಟಾಗಿದೆ. ಪರಿಣಾಮ ರಸ್ತೆ ಉದ್ದಕ್ಕೂ ವಾಹನಗಳು ನಿಲುಗಡೆಯಾಗಿ ಟ್ರಾಫಿಕ್ ಜಾಮ್ ಆಗಿದೆ.
ಮಂಗಳೂರಿನ ಪ್ರಮುಖ ಪ್ರದೇಶವಾಗಿರುವ ಪಂಪ್ವೆಲ್ ಬೆಂಗಳೂರು, ಕೇರಳ ಮತ್ತು ಮಹಾರಾಷ್ಟ್ರ ಸಂಪರ್ಕಿಸುವ ಸ್ಥಳವಾಗಿದೆ. ಕೇರಳದಿಂದ ಗೋವಾ, ಮಹಾರಾಷ್ಟ್ರ, ಮಂಗಳೂರಿನಿಂದ ಬೆಂಗಳೂರು ತಲುಪಲು ಈ ರಸ್ತೆಯನ್ನು ಬಳಸಲಾಗುತ್ತದೆ.