Breaking News

ಬಿಜೆಪಿ ಸಭೆಗೆ ಬಂದ ಬಳ್ಳಾರಿ ಜಿಲ್ಲಾ ಪ್ರಭಾರಿ ಸಿದ್ದೇಶ್ ಹೃದಯಾಘಾತದಿಂದ ನಿಧನ

Spread the love

ಬೆಂಗಳೂರು: ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ಮುಖಂಡ ಸಿದ್ದೇಶ್ ಯಾದವ್ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಪಕ್ಷದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಯಾದವ್, ಸಭೆ ಮುಗಿಸಿ ಹೊರಗೆ ಬಂದಾಗ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಿತಾದರೂ ಅಷ್ಟರಲ್ಲಿ ನಿಧನರಾಗಿದ್ದಾರೆ.

 

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಪದಾಧಿಕಾರಿಗಳ ಸಭೆ ನಡೆಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಲ್ಲ ಜಿಲ್ಲೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಚಿತ್ರದುರ್ಗದ ಹಿರಿಯೂರು ತಾಲೂಕಿನ ಸಿದ್ದೇಶ್ ಯಾದವ್ ಜಿಲ್ಲಾ ಪ್ರಭಾರಿಗಳ ಸಭೆಗೆ ಪಾಲ್ಗೊಳ್ಳಲು ಬಂದಿದ್ದರು. ಸಭೆ ಮುಗಿಸಿ ಹೊರಗೆ ಬಂದಾಗ ಕುಸಿದು ಬಿದ್ದ ಸಿದ್ದೇಶ್ ಯಾದವ್​ರನ್ನು ತಕ್ಷಣ ಕೆಸಿ ಜನರಲ್ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಲಾಯಿತು, ಆದರೆ ಈ ಸಂದರ್ಭದಲ್ಲಿ ಹೃದಯಾಘಾತದಿಂದ ಅಸುನೀಗಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ”ಇಂದು ನಮ್ಮ ಕಾರ್ಯಕರ್ತ ಸಿದ್ದೇಶ ಮೃತಪಟ್ಟಿದ್ದಾರೆ. ಬಳ್ಳಾರಿ, ರಾಯಚೂರು ಸೇರಿ ನಾಲ್ಕು ಜಿಲ್ಲೆಯ ವಿಭಾಗದ ಪ್ರಭಾರಿ ಆಗಿದ್ದರು.


Spread the love

About Laxminews 24x7

Check Also

ಕಬ್ಬು ಬೆಳೆಗಾರರ ಹೋರಾಟ ಅಂತ್ಯ – ಜಿಲ್ಲಾಧಿಕಾರಿ ಆನಂದ ಕೆ. ಮಧ್ಯಸ್ಥಿಕೆಯಿಂದ ಪರಿಹಾರ

Spread the love ಕಬ್ಬು ಬೆಳೆಗಾರರ ಹೋರಾಟ ಅಂತ್ಯ – ಜಿಲ್ಲಾಧಿಕಾರಿ ಆನಂದ ಕೆ. ಮಧ್ಯಸ್ಥಿಕೆಯಿಂದ ಪರಿಹಾರ ವಿಜಯಪುರದಲ್ಲಿ ಕಳೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ