Breaking News

ದ್ವಿತೀಯ ಪಿಯುಸಿ ಪಾಸ್ ಔಟ್ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಡಿಜಿ ಲಾಕರ್​ನಲ್ಲಿ ಲಭ್ಯ

Spread the love

ಬೆಂಗಳೂರು : 2023ರ ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ 5,24,128 ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ಡಿಜಿ ಲಾಕರ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ.

ವಿದ್ಯಾರ್ಥಿಗಳು ತಮ್ಮ ಆಧಾರ್ ಸಂಖ್ಯೆ ನಮೂದಿಸುವ ಮೂಲಕ ಅಂಕಪಟ್ಟಿಯನ್ನ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

2023ರ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಜೂನ್ 26 ರಿಂದಲೇ ಡಿಜಿ ಲಾಕರ್​​ಗೆ ಅಪ್ಲೋಡ್​​ಗೆ ಮಾಡಲಾಗಿದೆ. ಹಾಗಾಗಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಎನ್‌ಎಡಿ ಡಿಜಿಲಾಕರ್ ವೆಬ್ ಸೈಟ್ www.nad.digilocker.gov.in ಮೂಲಕ ಆಧಾರ್ ಸಂಖ್ಯೆಯನ್ನು ನಮೂದಿಸಿ ನೋಂದಾಯಿಸಿದ ಮೊಬೈಲ್ ಗೆ ಬರುವ ಒಟಿಪಿ ನಮೂದಿಸಿ ಲಾಗಿನ್ ಆದ ನಂತರ 2023ರ ಮುಖ್ಯ ಪರೀಕ್ಷೆಯ ನೋಂದಣಿ ಸಂಖ್ಯೆಯನ್ನು ಹಾಗೂ ಪರೀಕ್ಷೆ ಉತ್ತೀರ್ಣರಾದ ಅವಧಿ ನಮೂದಿಸಿ ತಮ್ಮ ಅಂಕಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.


Spread the love

About Laxminews 24x7

Check Also

ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ

Spread the love ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ. ಯಾವುದೇ ದೂರದೃಷ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ