Breaking News

ಮಧ್ಯಪ್ರದೇಶದ ಗಡಿಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ: 10 ಮಂದಿ ದಾರುಣ ಸಾವು,

Spread the love

ಹಾರಾಷ್ಟ್ರ,- ಮಧ್ಯಪ್ರದೇಶದ ಗಡಿಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದುರಂತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.

ಧುಲೆ (ಮಹಾರಾಷ್ಟ್ರ): ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್​ ಮತ್ತು ಇತರೆ ವಾಹನಗಳ ಮೇಲೆ ಹರಿದು ಪರಿಣಾಮ ಸಂಭವಿಸಿದ ಸರಣಿ ಭೀಕರ ಅಪಘಾತದಲ್ಲಿ 10 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಮಹಾರಾಷ್ಟ್ರದಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಗಡಿಭಾಗದ ಪಲಾಸ್ನೇರ್ ಗ್ರಾಮದ ಮುಂಬೈ- ಆಗ್ರಾ ಹೆದ್ದಾರಿಯಲ್ಲಿ ಈ ಭೀಕರ ದುರಂತ ಸಂಭವಿಸಿದೆ. ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದು, ಅವರನ್ನು ಶಿರಪುರ ಕಾಟೇಜ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ವಂಡರ್​ ಸಿಮೆಂಟ್​ ಕಂಪನಿಯ ಜಲ್ಲಿ ಕಲ್ಲು ತುಂಬಿದ್ದ ಕಂಟೈನರ್​ ನಿಯಂತ್ರಣ ಕಳೆದುಕೊಂಡು ಮುಂದಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ನಂತರ ಇತರ ವಾಹನಗಳ ಮೇಲೂ ಹರಿದಿದೆ. ಅಷ್ಟಕ್ಕೆ ನಿಲ್ಲದ ಅದು ಹೆದ್ದಾರಿ ಬಳಿ ಇದ್ದ ಸಣ್ಣ ಹೋಟೆಲ್​ ಒಳಗೆ ನುಗ್ಗಿದೆ. ಇದರಿಂದ ಸ್ಥಳದಲ್ಲಿ ಭೀಕರತೆ ಉಂಟಾಗಿದೆ. ಮೊದಲು ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ್ದರು. ಗಂಭೀರ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಸೇರಿಸಿದಾಗ ಮತ್ತೆ ಮೂವರು ಸಾವನ್ನಪ್ಪಿದ್ದಾರೆ.

ಅಪಘಾತ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದ್ದು ಪೊಲೀಸರು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಕಂಟೈನರ್​ನಲ್ಲಿದ್ದ ಜಲ್ಲಿ ಕಲ್ಲು ಹೆದ್ದಾರಿ ಮೇಲೆ ಬಿದ್ದಿದ್ದು ಒಂದು ಪಥದ ಸಂಚಾರ ಸ್ಥಗಿತಗೊಂಡಿದೆ. ಬಂದ್ ಆಗಿರುವ ರಸ್ತೆಯನ್ನು ಜನರೇ ಕ್ಲಿಯರ್​ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆಯ ಅಬ್ಬರ

Spread the love ಬೆಂಗಳೂರು: ನಗರದಲ್ಲಿ ತಡರಾತ್ರಿ ನಿರಂತರವಾಗಿ ಸುರಿದ ಮಳೆ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ. ಶುಕ್ರವಾರ ರಾತ್ರಿ 9 ಗಂಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ