Breaking News

ವಿರೋಧ ಪಕ್ಷದ ನಾಯಕನ ಆಯ್ಕೆಯಾದ ಮೇಲೆ ಬಿಜೆಪಿ ಎರಡು ಪಾರ್ಟಿ ಆಗುತ್ತೆ: ಕಿಮ್ಮನೆ ರತ್ನಾಕರ್

Spread the love

ಶಿವಮೊಗ್ಗ: ”ವಿರೋಧ ಪಕ್ಷದ ನಾಯಕ ಹಾಗೂ ರಾಜಾಧ್ಯಕ್ಷರ ಆಯ್ಕೆಯಾದ ಬಳಿಕ ಬಿಜೆಪಿಯಲ್ಲಿ ಎರಡು ಪಾರ್ಟಿ ಆಗುತ್ತದೆ” ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವ್ಯಂಗ್ಯವಾಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ದೇಶದಲ್ಲೇ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿದೆ ಪಕ್ಷ ಎನ್ನುವ ಬಿಜೆಪಿ ಪಕ್ಷದ ಕಥೆ ಹೀಗಾಗಿದೆ. ಕರ್ನಾಟಕದಲ್ಲಿ ಎಷ್ಟು ಜಿಲ್ಲೆಯಿದೆ ಅಂತ ಗೊತ್ತಿರದವರನ್ನು ರಾಜ್ಯಾಧ್ಯಕ್ಷನಾಗಿ ಮಾಡಿದ್ದಾರೆ. ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದರು. ಈಗ ಕೊಡಲ್ಲ ಎನ್ನುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಬಿಜೆಪಿ ಪಕ್ಷದ ಸಂಘಟನೆಯೇ ಇಲ್ಲದಂತಾಗಿದೆ” ಎಂದು ವಾಗ್ದಾಳಿ ನಡೆಸಿದರು. ”ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ನನ್ನ ಪ್ರಕಾರ ಚೀಟಿ ಎತ್ತುವ ಮೂಲಕ ಆಯ್ಕೆ ಮಾಡುತ್ತಾರೆ ಅನಿಸುತ್ತೆ ಎಂದು ಲೇವಡಿ ಮಾಡಿದರು. ಬಿಜೆಪಿ ಬಾಯಿ ಬಂದಂತೆ ಹೇಳಿಕೆಗಳನ್ನು ನೀಡುವುದನ್ನು ನೋಡಿದರೆ ನಮಗೆ ಕನಿಕರ ಬರುತ್ತದೆ” ಎಂದರು.

 

ಕಿಮ್ಮನೆ ಉಪವಾಸ ಸತ್ಯಾಗ್ರಹ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ 9 ವರ್ಷದ ಆಡಳಿತಾವಧಿಯಲ್ಲಿ ಕೊಟ್ಟ ಆಶ್ವಾಸನೆಗಳನ್ನು ಈಡೇರಿಸದೇ ಇರುವುದರ ವಿರುದ್ಧ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹ ನಡೆಸಿದರು. ನಗರದ ಗಾಂಧಿ ಪಾರ್ಕ್​ನ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಸತ್ಯಾಗ್ರಹ ನಡೆಸಿ ಅವರು ಮಾತನಾಡಿದರು. ಇಂದು ನಾವು ಬಿಜೆಪಿಯ ಸಿದ್ಧಾಂತದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇನೆ. ಅಧಿಕಾರವಿಲ್ಲದೇ ಬದುಕಲು ಸಾಧ್ಯವಿಲ್ಲ ಎನ್ನುವ ಸ್ಥಿತಿಯಲ್ಲಿ ಬಿಜೆಪಿಯವರಿದ್ದಾರೆ. ಇದರಿಂದಲೇ ಹಲವು ರಾಜ್ಯಗಳಲ್ಲಿ ಬೇರೆ ಮಾರ್ಗಗಳ ಮೂಲಕ ಅಧಿಕಾರ ನಡೆಸುತ್ತಿದ್ದಾರೆ ಎಂದರು.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ