Breaking News

ಅಕ್ಕತಂಗೇರಹಾಳದಲ್ಲಿ ಮಂಗಳವಾರ ಜೋಡಿ ಕೊಲೆ

Spread the love

ಬೆಳಗಾವಿ :ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಕತಂಗೇರಹಾಳದಲ್ಲಿ ಮಂಗಳವಾರ ಜೋಡಿ ಕೊಲೆ ನಡೆದಿದೆ.

ಅಕ್ಕತಂಗೇರಹಾಳ ಗ್ರಾಮದ ಮಲ್ಲಿಕಾರ್ಜುನ ಜಗದಾರ(40) ಹಾಗೂ ರೇಣುಕಾ ಮಾಳಗಿ (42) ಹತ್ಯೆಗೀಡಾದವರು. ಕೊಲೆಗೈದ ವ್ಯಕ್ತಿ ಯಲ್ಲಪ್ಪ ಮಾಳಗಿ(45) ಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಲೆಗೆ ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿದೆ.

ಅಕ್ರಮ ಸಂಬಂಧ ಶಂಕಿಸಿ ಪತಿ ಯಲ್ಲಪ್ಪ ಮನೆಯಲ್ಲಿದ್ದ ರೇಣುಕಾಳನ್ನು ಕೊಲೆ ಮಾಡಿದ್ದಾನೆ. ನಂತರ ಅಲ್ಲಿಂದ ಮಲ್ಲಿಕಾರ್ಜುನ ಮನೆಗೆ ಹೋಗಿದ್ದಾನೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಮಲ್ಲಿಕಾರ್ಜುನ ಮನೆ ಹೊರ ಭಾಗದಲ್ಲಿ ಸ್ನಾನ ಮಾಡುತ್ತಿರುವಾಗಲೇ ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಂಕಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಹಾಗೂ ಅಂಕಲಗಿ ಪೊಲೀಸರು


Spread the love

About Laxminews 24x7

Check Also

ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆ ಗೆದ್ದ ಬೆಳಗಾವಿ ವಿದ್ಯಾರ್ಥಿಗಳು

Spread the love ಬೆಳಗಾವಿ : ನಗರದ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಒಬ್ಬರು ವಿದ್ಯಾರ್ಥಿಗಳು ಇಂಡೋನೇಷ್ಯಾದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ