Breaking News

ಭಾರತ ಕ್ರಿಕೆಟ್​ ತಂಡದ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಅಜಿತ್ ಅಗರ್ಕರ್​ ನೇಮಕ

Spread the love

ನವದೆಹಲಿ: ಭಾರತ ಹಿರಿಯ ಪುರುಷರ ಕ್ರಿಕೆಟ್​ ತಂಡದ ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ಮಾಜಿ ವೇಗಿ ಅಜಿತ್​ ಅಗರ್ಕರ್​ ನೇಮಕವಾಗಿದ್ದಾರೆ.

ಕ್ರಿಕೆಟ್ ಸಲಹಾ ಸಮಿತಿಯ (ಸಿಎಸಿ) ಶಿಫಾರಸಿನ ಮೇರೆಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಮಂಗಳವಾರ ಈ ವಿಚಾರವನ್ನು ಪ್ರಕಟಿಸಿದ್ದಾರೆ.

ಸುಲಕ್ಷಣಾ ನಾಯಕ್, ಅಶೋಕ್ ಮಲ್ಹೋತ್ರಾ ಮತ್ತು ಜತಿನ್ ಪರಾಂಜಪೆ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿಯು (ಸಿಎಸಿ) ಪುರುಷರ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕಾಗಿ ಅರ್ಜಿದಾರರನ್ನು ಸಂದರ್ಶಿಸಿತು. ಮೂವರು ಸದಸ್ಯರ ಸಿಎಸಿ ಸಮಿತಿ ಅಜಿತ್ ಅಗರ್ಕರ್ ಅವರನ್ನು ಸರ್ವಾನುಮತದಿಂದ ಶಿಫಾರಸು ಮಾಡಿದೆ ಎಂದು ಜಯ್​ ಶಾ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಗರ್ಕರ್ ಭಾರತ ತಂಡದ ಪರವಾಗಿ 26 ಟೆಸ್ಟ್, 191 ಏಕದಿನ ಮತ್ತು 4 ಟಿ20 ಪಂದ್ಯಗಳನ್ನು ಆಡಿದ್ದಾರೆ. 1999, 2003 ಮತ್ತು 2007ರ ಏಕದಿನ ವಿಶ್ವಕಪ್ ತಂಡದ ಭಾಗವಾಗಿದ್ದರು. 2007ರ ಟಿ20 ವಿಶ್ವಕಪ್​ ವಿಜೇತ ತಂಡದಲ್ಲೂ ಇದ್ದರು.

 

 

ಪ್ರಧಾನ ಆಯ್ಕೆಗಾರರಾಗಿ ನೇಮಕವಾಗಿರುವ ಅಜಿತ್​ ಅಗರ್ಕರ್​ ಉತ್ತಮ ಸಂಬಳ ಪಡೆಯಲಿದ್ದಾರೆ. ಸುಮಾರು 1 ಕೋಟಿ ರೂಪಾಯಿ ವೇತನ ಪಡೆಯಲಿದ್ದಾರೆ ಎಂದು ಹೇಳಲಾಗಿದೆ. ಇದಲ್ಲದೇ, ಸಮಿತಿಯ ಉಳಿದ ಸದಸ್ಯರಿಗೆ ತಲಾ 90 ಲಕ್ಷ ರೂಪಾಯಿ ವೇತನ ಸಿಗಲಿದೆ.

ವೆಸ್ಟ್​​ ಇಂಡೀಸ್​ ಸರಣಿಗೆ ತಂಡ ಆಯ್ಕೆ: ಈ ತಿಂಗಳಲ್ಲಿ ಆರಂಭವಾಗಲಿರುವ ವೆಸ್ಟ್​ ಇಂಡೀಸ್​ ಸರಣಿಗೆ ಟೆಸ್ಟ್ ಮತ್ತು ಏಕದಿನ ತಂಡವನ್ನು ಆಯ್ಕೆ ಮಾಡಲಾಗಿದೆ. ಈ ಎರಡು ಸರಣಿ ಪೂರ್ಣಗೊಂಡ ನಂತರ ಟಿ20 ಸರಣಿ ನಡೆಯಲಿದ್ದು, ಅಜಿತ್​ ಅಗರ್ಕರ್​ ನೇತೃತ್ವದಲ್ಲಿ ಮೊದಲ ತಂಡದ ಆಯ್ಕೆ ನಡೆಯಲಿದೆ. ಬಿಸಿಸಿಐ ಕೂಡ ಇದನ್ನೇ ಬಯಸಿದೆ ಎಂದು ವರದಿಯಾಗಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ