Breaking News

ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದೆ: ಯುವ ಕಾಂಗ್ರೆಸ್ ಕಾರ್ಯಕರ್ತರು

Spread the love

ಬೆಳಗಾವಿ : ಅಕ್ಕಿ ವಿತರಣೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಇಂದು ಧರಣಿ ನಡೆಸಿದರು.

ಕಾಂಗ್ರೆಸ್ ಯುವ ಘಟಕದ ಜಿಲ್ಲಾಧ್ಯಕ್ಷ ಕಾರ್ತಿಕ ಪಾಟೀಲ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅನ್ನಭಾಗ್ಯಕ್ಕೆ ಕನ್ನ ಹಾಕಿರುವ ಬಿಜೆಪಿಗೆ ಧಿಕ್ಕಾರ, ಮೋದಿ ಹಟಾವ್ ದೇಶ ಬಚಾವ್, ಬೇಕೆ ಬೇಕು ಅಕ್ಕಿ ಬೇಕು ಎಂದು ಘೋಷಣೆ ಕೂಗಿದ ಕೈ ಕಾರ್ಯಕರ್ತರು ಕಾಡಾ ಕಚೇರಿ ಬಳಿಯ ಸಂಸದೆ ಮಂಗಲಾ ಅಂಗಡಿ ಅವರ ಕಚೇರಿ ಮುಂದೆ ಕೆಲ ಕಾಲ ಧರಣಿ ಕುಳಿತರು.

ಧ್ವನಿ ಎತ್ತಬೇಕಾದ ಸಂಸದರು ಮೌನ ವಹಿಸಿದ್ದಾರೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಕೇಂದ್ರ ಸರ್ಕಾರ ನಮಗೆ ಸಿಗಬೇಕಾದ ಅಕ್ಕಿ ಕೊಡುತ್ತಿಲ್ಲ. ರಾಜ್ಯದ ಪರವಾಗಿ ಧ್ವನಿ ಎತ್ತಬೇಕಾದ ಸಂಸದರು ಮೌನ ವಹಿಸಿದ್ದಾರೆ. ನಮ್ಮ ರಾಜ್ಯಕ್ಕೆ ಅಕ್ಕಿ ಕೊಡಿ ಎಂದು ಯಾವ ಬಿಜೆಪಿ‌ ನಾಯಕರು ಪ್ರಧಾನಿ ಮೋದಿ ಮುಂದೆ ಕೇಳುವ ಧೈರ್ಯ ಮಾಡದೇ ಇರುವುದು ರಾಜ್ಯದ ದೊಡ್ಡ ದುರಂತ ಎಂದು ಕೈ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ: ಇದೇ ವೇಳೆ ಮಾತನಾಡಿದ ಕಾರ್ತಿಕ ಪಾಟೀಲ, ಅಕ್ಕಿ ವಿತರಣೆಯಲ್ಲಿ ಕೇಂದ್ರದ ತಾರತಮ್ಯ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ರಾಜ್ಯಕ್ಕೆ ವಿತರಣೆ ಮಾಡುತ್ತಿಲ್ಲ. ದುಡ್ಡು ಕೊಡುತ್ತೇವೆ ಎಂದರೂ ಕೊಡದೇ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ಈ ಮೂಲಕ ಬಡವರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ. ಮಳೆಯಾಗುತ್ತಿಲ್ಲ, ಬೆಲೆ ಏರಿಕೆಯಿಂದ ಸಂಕಷ್ಟದ ಸ್ಥಿತಿ ನಿರ್ಮಾಣ ಆಗಿದ್ದರೂ, ರಾಜ್ಯದ ಜನರ ನೆರವಿಗೆ ಕೇಂದ್ರ ಸರ್ಕಾರ ಬರುತ್ತಿಲ್ಲ ಎಂದು ಆರೋಪಿಸಿದರು.


Spread the love

About Laxminews 24x7

Check Also

ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ ಮಾಲಿನಿ ಸಿಟಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಎಸ್.ಎನ್.ದೇಸಾಯಿ ಹೇಳಿದರು.

Spread the loveಬೆಳಗಾವಿ :ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ