Breaking News

ಎಕ್ಸ್​​​​ಪ್ರೆಸ್ ವೇನಲ್ಲಿ ಅಪಘಾತ ಹೆಚ್ಚಳಕ್ಕೆ ಅತಿವೇಗವೇ ಕಾರಣ: ಜಾರಕಿಹೊಳಿ

Spread the love

ಬೆಂಗಳೂರು: ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ದಲ್ಲಿ ಅಪಘಾತ ಹೆಚ್ಚಳ ಸೇರಿದಂತೆ ಇರುವ ನ್ಯೂನತೆ ಕುರಿತು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಗಮನಕ್ಕೆ ತಂದಿದ್ದು, ಸುರಕ್ಷಿತ ಪ್ರಯಾಣ ಮತ್ತು ನ್ಯೂನತೆ ಸರಿಪಡಿಸಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.

 

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಕ್ಸ್‌ಪ್ರೆಸ್‌ ವೇ ನಲ್ಲಿನ ಅಪಘಾತಗಳು ಹೆಚ್ಚಾಗುತ್ತಿವೆ, ಟೋಲ್​​ಗೆ ಜನರ ಗಲಾಟೆಯಾಗುತ್ತಿದೆ, ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಲ್ಲುತ್ತಿದೆ ಎಂದಿದ್ದಾರೆ ಈ ಸಂಬಂಧ ಈಗಾಗಲೇ ನಿನ್ನೆ ಸಭೆ ಕರೆದು ಚರ್ಚೆ ಮಾಡಿದ್ದೇವೆ.

ಈ ರಸ್ತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಂತ್ರಣದಲ್ಲಿದೆ. ಲೋಪಗಳಿದ್ದಲ್ಲಿ ಅದನ್ನು ಪ್ರಾಧಿಕಾರದ ಜೊತೆ ಸಂಪರ್ಕ ಮಾಡಿ ಚರ್ಚಿಸಲಾಗುತ್ತದೆ. ಅಪಘಾತಕ್ಕೆ ಅತಿವೇಗ ಕಾರಣ, ಕೆಲವೆಡೆ ಅವೈಜ್ಞಾನಿಕ ಸಮಸ್ಯೆ ಇದೆ, ಎಲ್ಲ ನಿಯಂತ್ರಣ ಮಾಡಲು ಕ್ರಮ ವಹಿಸಲಾಗುತ್ತದೆ. ಎಲ್ಲ ಸಮಸ್ಯೆ ಕುರಿತು ಗಡ್ಕರಿ ಗಮನಕ್ಕೂ ತಂದಿದ್ದೇವೆ. ಪರಿಶೀಲಿಸಿ ಕ್ರಮ ವಹಿಸಲಿದ್ದೇವೆ ಎಂದು ಉತ್ತರಿಸಿದರು.

ವಸತಿ ಯೋಜನೆ ಅರ್ಜಿ ವಿಲೇವಾರಿಗೆ ಕ್ರಮ:ವಸತಿ ಯೋಜನೆಗಳಡಿ ಮಂಜೂರಾತಿಗಾಗಿ ಬಾಕಿ ಉಳಿದಿರುವ ಅರ್ಜಿಗಳ ವಿಲೇವಾರಿಗೆ ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುತ್ತಿದೆ. ಹಿಂದಿನ ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಗೆ ಹೋಲಿಸಿದಲ್ಲಿ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಕಡಿಮೆ ಮನೆಗಳ ನಿರ್ಮಾಣವಾಗಿದೆ. ಹಾಗಾಗಿ ವಸತಿ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಲಾಗುತ್ತದೆ ಎಂದು ಸಚಿವ ಕೃಷ್ಣಬೈರೇಗೌಡ ಭರವಸೆ ನೀಡಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಯುಬಿ ವೆಂಕಟೇಶ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣಬೈರೇಗೌಡ, 519498 ಮನೆ ಕಳೆದ ನಾಲ್ಕು ವರ್ಷದಲ್ಲಿ ನಿರ್ಮಾಣವಾಗಿದೆ. ಆದರೆ, ಈ ಹಿಂದೆ 2014-2019 ರ ವರೆಗೆ 18 13 298 ಮನೆಗಳ ನಿರ್ಮಾಣ ಕೇವಲ ಐದು ವರ್ಷದಲ್ಲಿ ಆಗಿತ್ತು. ಅದಕ್ಕೆ ಹೋಲಿಸಿದಲ್ಲಿ ಈಗಿನ ನಾಲ್ಕು ವರ್ಷ ಕಡಿಮೆ ಮನೆಗಳ ನಿರ್ಮಾಣ ಆಗಿದೆ.

ಹಾಗಾಗಿ ವಸತಿ ಯೋಜನೆಗಳ ಅಡಿ ಮನೆಗಳ ನಿರ್ಮಾಣಕ್ಕೆ ವೇಗ ನೀಡಲಾಗುತ್ತದೆ. ಆಯ್ಕೆ ಸಮಿತಿಯಿಂದ ಅಂತಿಮಗೊಂಡು ಬಂದ ಅರ್ಜಿಗಳ ವಿಲೇವಾರಿಗೆ ಕ್ರಮ ವಹಿಸಲಾಗುತ್ತದೆ. ಇದೇ ವೇಳೆ, ಗ್ರಾಪಂನಲ್ಲಿ ಉತ್ತಮ ಕೆಲಸ ಮಾಡಿದವರಿಗೆ ಪ್ರಶಂಸೆ ನೀಡುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ