Breaking News

BUDJET :ಜನರಿಗೆ ತೆರಿಗೆ ಹೊರೆ ಹಾಕಿದರೆ ಜನ ವಿರೋಧಿ ಗ್ಯಾರಂಟಿಗಳಾಗುತ್ತವೆ.: ಬೊಮ್ಮಾಯಿ

Spread the love

ಬೆಂಗಳೂರು : ಜನರ ಮೇಲೆ ತೆರಿಗೆ ಹೊರೆ ಹಾಕದೇ, ಹೆಚ್ಚು ಸಾಲ ಮಾಡದೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು,‌ ಜನರಿಗೆ ತೆರಿಗೆ ಹೊರೆ ಹಾಕಿದರೆ ಜನ ವಿರೋಧಿ ಗ್ಯಾರಂಟಿಗಳಾಗುತ್ತವೆ. ಹೆಚ್ಚು ಸಾಲ ತೆಗೆದು ಕೊಳ್ಳದೇ, ಜನರ ಮೇಲೆ ತೆರಿಗೆ ಹಾಕದೇ ಗ್ಯಾರಂಟಿಗಳನ್ನು ಕೊಡಬೇಕು. ಮಾಡಿಲ್ಲ ಅಂದರೆ ಜನರ ಶ್ರಮದ ಹಣವನ್ನು ಕಿತ್ತುಕೊಂಡಂತೆ ಆಗುತ್ತದೆ ಎಂದು ಹೇಳಿದರು.

ರಾಜ್ಯಪಾಲರ ಭಾಷಣ ನೋಡಿದಾಗ ಜನರ ನಿರೀಕ್ಷೆ ಈಡೇರಿಸುವ ಭಿನ್ನ ಆಡಳಿತ ನೀಡುವ ಭರವಸೆ ಇಲ್ಲ. ಚರ್ವಿತಚರ್ವಣ ಭಾಷಣ ಇದಾಗಿದೆ. ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿಗಳನ್ನು ಸಾಮಾನ್ಯ ಆಶ್ವಾಸನೆಗಳನ್ನು ವಿಶೇಷ ಎಂದು ಬಿಂಬಿಸಿದ್ದಾರೆ‌ ಎಂದು ಅಸಮಾಧಾನ ಹೊರಹಾಕಿದ ಬೊಮ್ಮಾಯಿ ಅವರು, ಗ್ಯಾರಂಟಿಗಳಿಗೆ ಜನರು ಮರುಳಾಗಿದ್ದಾರೋ ಗೊತ್ತಿಲ್ಲ. ಆದರೆ, ಕಾಂಗ್ರೆಸ್​ ನವರು ಮನ್ನಣೆ ಕೊಟ್ಟಿದ್ದಾರೆ.

ಜನರು ನೀವು ಕೊಟ್ಟ ಮಾತುಗಳನ್ನು ಹೆಚ್ಚು ನಂಬಿದ್ದಾರೆ. ಗೃಹ ಲಕ್ಷ್ಮಿ, ಎಲ್ಲರಿಗೂ 10 ಕೆಜಿ ಉಚಿತ ಅಕ್ಕಿ, ಎಲ್ಲರಿಗೂ ಗೃಹ ಜ್ಯೋತಿ, ಡಿಗ್ರಿಯಾದವರಿಗೆ ನಿರುದ್ಯೋಗ ಭತ್ಯೆ ಅಂತ‌ ಹೇಳಿದ್ದೀರಿ. ಈಗ ಎಲ್ಲ ಗ್ಯಾರಂಟಿಗಳಿಗೂ ಕಂಡೀಷನ್ ಹಾಕಿ. ಎಲ್ಲದಕ್ಕೂ ಏಜೆಂಟ್​ಗಳು ಹುಟ್ಟಿಕೊಂಡಿದ್ದಾರೆ ಎಂದು ಬೊಮ್ಮಾಯಿ ಆರೋಪಿಸಿದರು.

ನೀವು ಘೋಷಿಸಿದ ಗ್ಯಾರಂಟಿಗಳ ಪೈಕಿ ಕೇವಲ ಬಸ್ ಪ್ರಯಾಣ ಮಾತ್ರ ಆರಂಭಿಸಿದ್ದೀರಿ. ಇದೀಗ 10 ಕೆಜಿ ಅಕ್ಕಿ ಬದಲು ದುಡ್ಡು ಕೊಡುವುದಾಗಿ ಹೇಳಿದ್ದೀರಿ. ನೀವು ಕೊಡುವ ಹಣಕ್ಕೆ ಎರಡೂವರೆ ಕೆಜಿ ಅಕ್ಕಿ ಬರುತ್ತದೆ. ಇದು ಬಡವರಿಗೆ ಪರಿಣಾಮ ಬೀರುತ್ತದೆ. ನೀವು ಘೋಷಣೆ ಮಾಡಿರುವಂತೆ ಎಲ್ಲ ಯೋಜನೆಗಳ ಜಾರಿಗೆ 52 ಸಾವಿರ ಕೋಟಿ ಖರ್ಚಾಗುತ್ತದೆ ಅಂತ ಹೇಳಿದ್ದೀರಿ. ಆದರೆ, ಕಂಡೀಷನ್ ಹಾಕಿರೋದರಿಂದ ಸುಮಾರು 20 ರಿಂದ 25 ಸಾವಿರ ಕೊಟಿ ಮಾತ್ರ‌ ಖರ್ಚಾಗಬಹುದು ಎಂದು ಕಾಂಗ್ರೆಸ್​ ವಿರುದ್ದ ಕಿಡಿಕಾರಿದರು.


Spread the love

About Laxminews 24x7

Check Also

ಹೆಚ್‌ಡಿಕೆಗೆ ಗೂಢಚರ್ಯೆಯ ಪಾಠ ಅವರ ತಂದೆಯೇ ಹೇಳಿಕೊಟ್ಟಿರಬಹುದು: ಸಿಎಂ ಕಿಡಿ

Spread the loveಬೆಂಗಳೂರು: ಕುಮಾರಸ್ವಾಮಿಯವರಿಗೆ  ಗೂಢಚರ್ಯೆಯ ಪಾಠವನ್ನು ಅವರ ಪೂಜ್ಯ ತಂದೆಯವರೇ  ಹೇಳಿಕೊಟ್ಟಿರಬಹುದು ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಫೋನ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ